ರಾಜ್ಯದಲ್ಲಿಂದು 213 ಮಂದಿಗೆ ಕೊರೋನ ದೃಢ, 5 ಮಂದಿ ಮೃತ್ಯು

Update: 2021-11-20 17:21 GMT

ಬೆಂಗಳೂರು, ನ. 20: ರಾಜ್ಯದಲ್ಲಿ ಶನಿವಾರ ಒಟ್ಟು 213 ಹೊಸ ಕೊರೋನ ಪ್ರಕರಣಗಳು ದೃಢವಾಗಿವೆ. 5 ಜನರು ಸೋಂಕಿಗೆ ಬಲಿಯಾಗಿದ್ದು, 370 ಜನರು ಗುಣಮುಖರಾಗಿದ್ದಾರೆ.

ರಾಜ್ಯದಲ್ಲಿ ಈಗಾಗಲೇ ಒಟ್ಟು ಸೋಂಕಿತರ ಸಂಖ್ಯೆ 29,93352ಕ್ಕೆ ತಲುಪಿದೆ. ಇಲ್ಲಿಯವರೆಗೆ ಒಟ್ಟು ಸಾವಿನ ಸಂಖ್ಯೆ 38,174ಕ್ಕೆ ತಲುಪಿದೆ.        
ಒಟ್ಟು ಸಕ್ರಿಯ ಕೊರೋನ ಪ್ರಕರಣ ಸಂಖ್ಯೆ 7,096ಕ್ಕೆ ಏರಿಕೆಯಾಗಿದ್ದು, ಇವರೆಲ್ಲ ಸೋಂಕಿತರು ಆಸ್ಪತ್ರೆ, ಕೊರೋನ ಕೇರ್ ಸೆಂಟರ್ ಹಾಗೂ ಮನೆಗಳಲ್ಲಿ ಚಿಕಿತ್ಸೆ ಮತ್ತು ಆರೈಕೆಯಲ್ಲಿದ್ದಾರೆ.

5 ಸೋಂಕಿತರು ಬಲಿ: ಕೋಲಾರ 2, ಬೆಂಗಳೂರು ನಗರ 2, ರಾಮನಗರ 1 ಸೇರಿದಂತೆ ಒಟ್ಟು 5 ಮಂದಿ ಸಾವನ್ನಪ್ಪಿದ್ದಾರೆ.

ರಾಜ್ಯದಲ್ಲಿ ಹೊಸದಾಗಿ 213 ಕೋವಿಡ್ ಪ್ರಕರಣಗಳು ದೃಢವಾಗಿದ್ದು, ಅದರಲ್ಲಿ ಬೆಂಗಳೂರು ನಗರ 134, ದಕ್ಷಿಣ ಕನ್ನಡ 12, ಮೈಸೂರು 17, ತುಮಕೂರು 9, ಹಾಸನ 8, ಉಡುಪಿ 5 ಸೇರಿದಂತೆ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಕೋವಿಡ್ ಸೋಂಕಿತರ ಸಂಖ್ಯೆ ಗಣನೀಯ ಪ್ರಮಾಣದಲ್ಲಿ ಕುಸಿದಿದೆ.

ರಾಜಧಾನಿಯಲ್ಲಿ 134 ಜನರಿಗೆ ಕೊರೋನ ದೃಢ

 ರಾಜಧಾನಿಯಲ್ಲಿ ಶನಿವಾರದಂದು 134 ಜನರಿಗೆ ಕೊರೋನ ಸೋಂಕು ದೃಢಪಟ್ಟಿದ್ದು, ಇಬ್ಬರು ಸೋಂಕಿಗೆ ಬಲಿಯಾಗಿದ್ದಾರೆ. 

ನಗರದಲ್ಲಿ ಇಲ್ಲಿಯವರೆಗೆ ಒಟ್ಟು 12,54,920 ಕೊರೋನ ಸೋಂಕಿತರು ದೃಢಪಟ್ಟಿದ್ದು, ಒಟ್ಟು 16,322 ಜನರು ಸೋಂಕಿಗೆ ಬಲಿಯಾಗಿದ್ದಾರೆ. ಒಟ್ಟು 12,32,752 ಜನರು ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ.

ಕೋವಿಡ್ ನಿಗದಿತ ಆಸ್ಪತ್ರೆಗಳು ಹಾಗೂ ಆರೋಗ್ಯ ಕೇಂದ್ರಗಳು ಹಾಗೂ ಆರೈಕೆ ಕೇಂದ್ರಗಳಲ್ಲಿ ಸಕ್ರಿಯ ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದಾರೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News