ಮೈಸೂರು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಸ್ಥಾನಕ್ಕೆ ಮತದಾನ

Update: 2021-11-21 06:37 GMT

ಮೈಸೂರು : ನಗರದ ಮಹಾರಾಣಿ ಮಹಿಳಾ ಕಲಾ ಕಾಲೇಜಿನ ಆವತಣದಲ್ಲಿ ರವಿವಾರ ಮತದಾನ ಪ್ರಕ್ರಿಯೆ ಚುರುಕುಗೊಂಡಿದೆ. ಜೊತೆಗೆ ಜಿಲ್ಲೆಯ ಎಂಟು ತಾಲ್ಲೂಕು ಕೇಂದ್ರಗಳಲ್ಲಿ ಮತದಾನ ನಡೆಯತ್ತಿದೆ. ಒಟ್ಟು 17 ಮತಗಟ್ಟೆ ಸ್ಥಾಪಿಸಲಾಗಿದೆ.

ಒಟ್ಟು ಮತದಾರರು ಎರಡು ಮತವನ್ನು ಚಲಾಯಿಸಬಹುದಾಗಿದ್ದು, ಒಂದು ಮತವನ್ನು ರಾಜ್ಯ ಅಧ್ಯಕ್ಷ ಸ್ಥಾನದ ಸ್ಪರ್ಧಿಗೆ, ಮತ್ತೊಂದು ಮತವನ್ನು ಜಿಲ್ಲಾ ಅಧ್ಯಕ್ಷ ಸ್ಥಾನದ ಸ್ಪರ್ಧಿಗೆ ಹಾಕಬೇಕಿದೆ.

ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಸ್ಥಾನಕ್ಕೆ ಸಾಹಿತಿ ಬನ್ನೂರು ಕೆ.ರಾಜು, ನಿಕಟಪೂರ್ವ ಗೌರವ ಕಾರ್ಯದರ್ಶಿ ಕೆ.ಎಸ್.ನಾಗರಾಜು, ಮಾಜಿ ಅಧ್ಯಕ್ಷ ಮಡ್ಡಿಕೆರೆ ಗೋಪಾಲ್  ಕಣದಲ್ಲಿದ್ದು, ಮತದಾರರನ್ನು ಒಲಿಸಿಕೊಳ್ಳುವ ಪ್ರಯತ್ನ ಮಾಡುತ್ತಿದ್ದಾರೆ. ಮೈಸೂರು ಜಿಲ್ಲೆಯಲ್ಲಿ ಒಟ್ಟು 13,378 ಮತರಾರಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News