ಮಂಡ್ಯದಲ್ಲಿ ಜನ ಸ್ವರಾಜ್ ಸಮಾವೇಶ

Update: 2021-11-21 08:58 GMT

ಮಂಡ್ಯ, ನ.21: ವಿಧಾನ ಪರಿಷತ್ ಚುನಾವಣೆ ಹಾಗೂ ಪಕ್ಷ ಸಂಘಟನೆಯಲ್ಲಿ ರಾಜ್ಯ‌ ಬಿಜೆಪಿ ವತಿಯಿಂದ ಹಮ್ಮಿಕೊಂಡಿರುವ ಜನಸ್ವರಾಜ್ ಸಮಾವೇಶ ಇಂದು ಮಂಡ್ಯ ಜಿಲ್ಲೆಯಲ್ಲಿ ಅದ್ದೂರಿಯಾಗಿ ನೆರವೇರಿತು. 

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಅಭಿವೃದ್ಧಿ ಸಚಿವ ಕೆ.ಎಸ್ ಈಶ್ವರಪ್ಪನವರು, ಕೇಂದ್ರ ಕೃಷಿ ರಾಜ್ಯ ಖಾತೆ ಸಚಿವೆ ಶೋಭಾ ಕರಂದ್ಲಾಜೆ ಅವರು, ರೇಷ್ಮೆ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ನಾರಾಯಣಗೌಡ ಅವರು, ಸಹಕಾರ ಸಚಿವರಾದ ಎಸ್ ಟಿ ಸೋಮಶೇಖರ್, ಮೀನುಗಾರಿಕೆ ಸಚಿವರಾದ ಅಂಗಾರ ಸೇರಿದಂತೆ ಹಲವು ಬಿಜೆಪಿ ಮುಖಂಡರು ಪಾಲ್ಗೊಂಡಿದ್ದರು.

ರಾಜ್ಯದಲ್ಲಿ ಮತ್ತೆ ಬಿಜೆಪಿ ಸರ್ಕಾರ ತರಲು ಹಗಲು, ರಾತ್ರಿ ಕೆಲಸ ಮಾಡ್ತೇನೆ: ಸಚಿವ ಡಾ.ನಾರಾಯಣಗೌಡ

ಬಿಜೆಪಿ ಸರ್ಕಾರದಲ್ಲಿ ಮಂತ್ರಿಯಾಗಿ ಉತ್ತಮ‌ ಕೆಲಸ ಮಾಡುವುದಕ್ಕೆ ನನಗೆ ಅವಕಾಶ ಸಿಕ್ಕಿದೆ. ಮಂಡ್ಯ ಜಿಲ್ಲೆಯ ಅಭಿವೃದ್ಧಿಗೆ ಬದ್ಧವಾಗಿದ್ದೇನೆ. ವಿಧಾನಪರಿಷತ್ ಚುನಾವಣೆಯಲ್ಲಿ ಬೂಕನಹಳ್ಳಿ  ಮಂಜು ಅವರನ್ನು ಗೆಲ್ಲಿಸಿದರೇ  ಮಂಡ್ಯ ಜಿಲ್ಲೆ ಅಭಿವೃದ್ಧಿಗೆ ಮತ್ತಷ್ಟು ಅನುಕೂಲ ಆಗಲಿದೆ ಎಂದು ಸಚಿವ ಡಾ.ನಾರಾಯಣಗೌಡ ಅವರು ಹೇಳಿದರು.

ಮಂಡ್ಯದಲ್ಲಿ ಬಿಜೆಪಿ ಒಂದು ಸೀಟ್ ಗೆಲ್ಲೋಕೆ ಆಗಲ್ಲ ಅಂತಾ ಅಂತಿದ್ದರು. ಆದರೆ ಇವತ್ತು ಮಂಡ್ಯದಲ್ಲಿ ಬಿಜೆಪಿ ಗೆಲ್ಲುವ ಮೂಲಕ ವಿರೋಧಿಗಳಿಗೆ ತಕ್ಕ ಉತ್ತರ ನೀಡಿದ್ದಾರೆ‌ ಎಂದು ಸಚಿವ‌ ಡಾ.ನಾರಾಯಣಗೌಡ ಅವರು ವಿಪಕ್ಷಗಳಿಗೆ ಟಾಂಗ್ ನೀಡಿದರು. 

ನಮ್ಮ ಮಂಡ್ಯ ಜಿಲ್ಲೆಯ ಅಭಿವೃದ್ಧಿ ನಮ್ಮ  ನಮ್ಮ ಸರ್ಕಾರ ಬದ್ಧವಾಗಿದ್ದು, ಈಗಾಗಲೇ 3 ಸಾವಿರ ಕೋಟಿಗೂ ಹೆಚ್ಚು ಅನಾದಾನ ನೀಡಿದೆ ಎಂದು ಸಚಿವ ಡಾ.ನಾರಾಯಣಗೌಡ ಅವರು ಹೇಳಿದರು.

ಮೈಷುಗರ್ ಸಕ್ಕರೆ ಕಾರ್ಖಾನೆಯನ್ನು, ಪಾಂಡವಪುರ ಸಕ್ಕರೆ ಕಾರ್ಖಾನೆಯನ್ನು ನಿಲ್ಲಿಸಿದ್ದವರು ಯಾರು..? ಆದರೆ, ನಮ್ಮ ಸರ್ಕಾರ ಪಾಂಡವಪುರ ಸಕ್ಕರೆ ಕಾರ್ಖಾನೆಯನ್ನು ಈಗಾಗಲೇ  ಆರಂಭ ಮಾಡಿದೆ. ಮೈಷುಗರ್  ಕಾರ್ಖಾನೆ ಆರಂಭ ಮಾಡಲು ನಮ್ಮ ಸರ್ಕಾರದಿಂದ ಎಲ್ಲಾ ರೀತಿಯ ಕ್ರಮ ಕೈಗೊಳ್ಳಲಾಗಿದೆ. ನಮ್ಮ ಸರ್ಕಾರ ಅಭಿವೃದ್ಧಿ ಪರ ಕೆಲಸಗಳನ್ನ ಕೈಗೊಂಡಿದೆ ಎಂದು ಸಚಿವ ಡಾ.ನಾರಾಯಣಗೌಡ ಅವರು ಹೇಳಿದರು.

ನಮ್ಮ ಜಿಲ್ಲೆಯಲ್ಲಿ ಯಾರು ಹೆದರುವ ಅಗತ್ಯ ಇಲ್ಲ. ಹಿಂದೆ ನಡೆಯುತ್ತಿದ್ದ ಗೂಂಡಾಗಿರಿಗೆ ಈಗ ಅವಕಾಶ ಇಲ್ಲ. ಎಲ್ಲವನ್ನೂ ಬಂದ್ ಮಾಡಲಾಗಿದೆ ಎಂದು ವಿರೋಧಿಗಳ ವಿರುದ್ಧ ಸಚಿವ ಡಾ.ನಾರಾಯಣಗೌಡ ಗುಡುಗಿದರು. ಕಾಂಗ್ರೆಸ್, ಜೆಡಿಎಸ್‌ನವರಿಗೆ ಏನು ಕೆಲಸ ಇಲ್ಲ.. ಅದಕ್ಕೆ ಸುಮ್ಮನೆ ಮಾತನಾಡುತ್ತಾರೆ. ನಮಗೆ ಕೆಲಸ ಇದೆ, ನಾವು ಕೆಲಸ ಮಾಡುತ್ತಿದ್ದೇವೆ. ಮತ್ತೊಮ್ಮೆ ರಾಜ್ಯದಲ್ಲಿ ಬಿಜೆಪಿಯನ್ನು ಅಧಿಕಾರಕ್ಕೆ ತರಲು ಎಲ್ಲರೂ ಸೇರಿ ಹಗಲು ರಾತ್ರಿ ಕೆಲಸ ಮಾಡೋಣ. ಪರಿಷತ್‌ ಚುನಾವಣೆಯಲ್ಲಿ ಮಂಜು ಅವರನ್ನು ಗೆಲ್ಲಿಸುವ ಮೂಲಕ ಪಕ್ಷಕ್ಕೆ ಮತ್ತಷ್ಟು ಬಲ ತುಂಬೋಣ ಎಂದು ಸಚಿವ ಡಾ.ನಾರಾಯಣಗೌಡ ಅವರು ಕರೆ ನೀಡಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News