ಕೆಎಸ್‌ಬಿಎ ಅಧ್ಯಕ್ಷರಾಗಿ ಶಾಸಕ ರಘುಪತಿ ಭಟ್ ಅವಿರೋಧ ಆಯ್ಕೆ
Update: 2021-11-21 20:23 IST
ಉಡುಪಿ, ನ.21: ಕರ್ನಾಟಕ ರಾಜ್ಯ ಬ್ಯಾಡ್ಮಿಂಟನ್ ಅಸೋಸಿಯೇಶನ್ (ಕೆಎಸ್‌ಬಿಎ) ಅಧ್ಯಕ್ಷರಾಗಿ ಉಡುಪಿ ಶಾಸಕ ಕೆ.ರಘುಪತಿ ಭಟ್ ಅವಿರೋಧ ವಾಗಿ ಆಯ್ಕೆಯಾಗಿದ್ದಾರೆ.
ಮಣಿಪಾಲದ ಹೋಟೆಲ್ ಕಂಟ್ರಿ ಹೊಟೇಲಿನಲ್ಲಿ ಇಂದು ನಡೆದ ಕರ್ನಾಟಕ ರಾಜ್ಯದ ಜಿಲ್ಲಾ ಬ್ಯಾಡ್ಮಿಂಟನ್ ಅಸೋಶಿಯೇಶನ್‌ಗಳ ಸಭೆಯಲ್ಲಿ ಈ ಆಯ್ಕೆ ಮಾಡಲಾಯಿತು. ಈ ಸಂದರ್ಭದಲ್ಲಿ ರಾಜ್ಯದ ಜಿಲ್ಲಾ ಬ್ಯಾಡ್ಮಿಂಟನ್ ಅಸೋಸಿ ಯೇಷನ್‌ನ ಪದಾಧಿಕಾರಿಗಳು ಉಪಸ್ಥಿತರಿದ್ದರು.