×
Ad

ಉಡುಪಿ : ರವಿವಾರ ಐವರು ಕೊರೋನಕ್ಕೆ ಪಾಸಿಟಿವ್

Update: 2021-11-21 20:30 IST

ಉಡುಪಿ, ನ.21: ರವಿವಾರವೂ ಜಿಲ್ಲೆಯಲ್ಲಿ ಐವರಲ್ಲಿ ಕೊರೋನ ಸೋಂಕು ಪತ್ತೆಯಾಗಿದೆ. ದಿನದಲ್ಲಿ ಆರು ಮಂದಿ ಸೋಂಕಿನಿಂದ ಗುಣಮುಖರಾದರೆ, 51 ಮಂದಿ ಇನ್ನೂ ಚಿಕಿತ್ಸೆಯಲ್ಲಿದ್ದಾರೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ನಾಗಭೂಷಣ ಉಡುಪ ತಿಳಿಸಿದ್ದಾರೆ.

ದಿನದಲ್ಲಿ ಇಬ್ಬರು ಪುರುಷರು ಹಾಗೂ ಮೂವರು ಮಹಿಳೆಯರಲ್ಲಿ ಸೋಂಕು ಪತ್ತೆಯಾಗಿದೆ. ಇವರಲ್ಲಿ ನಾಲ್ವರು ಉಡುಪಿ ತಾಲೂಕಿನವರಾದರೆ ಉಳಿದೊಬ್ಬರು ಕುಂದಾಪುರ ತಾಲೂಕಿನವರು. ಪಾಸಿಟಿವ್ ಬಂದ ಎಲ್ಲಾ ಐವರಿಗೂ ಅವರವರ ಮನೆಯಲ್ಲಿರಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಇಂದು ಸಹ ಜಿಲ್ಲೆಯಲ್ಲಿ ಕೊರೋನದಿಂದ ಯಾರೂ ಮೃತಪಟ್ಟ ವರದಿ ಬಂದಿಲ್ಲ.

ಶನಿವಾರ ಸೋಂಕಿನಿಂದ ಆರು ಮಂದಿ ಗುಣಮುಖರಾಗಿದ್ದು, ಈವರೆಗೆ ಕೊರೋನದಿಂದ ಚೇತರಿಸಿಕೊಂಡವರ ಸಂಖ್ಯೆ 76,298ಕ್ಕೇರಿದೆ. ನಿನ್ನೆ ಜಿಲ್ಲೆಯಲ್ಲಿ 1235 ಮಂದಿಗೆ ಕೋವಿಡ್ ಪರೀಕ್ಷೆ ನಡೆಸಲಾಗಿದೆ. ಜಿಲ್ಲೆಯಲ್ಲಿ ಈವರೆಗೆ ಸೋಂಕಿಗೆ ಪಾಸಿಟಿವ್ ಬಂದವರ ಸಂಖ್ಯೆ 76,825ಕ್ಕೇರಿದೆ.

486 ಮಂದಿಗೆ ಲಸಿಕೆ: ಇಂದು ಜಿಲ್ಲೆಯಲ್ಲಿ ಒಟ್ಟು 486 ಮಂದಿ ಕೋವಿಡ್ ಲಸಿಕೆ ಸ್ವೀಕರಿಸಿದ್ದಾರೆ. ಇವರಲ್ಲಿ 38 ಮಂದಿ ಮೊದಲ ಡೋಸ್ ಹಾಗೂ 448 ಮಂದಿ ಎರಡನೇ ಡೋಸ್ ಸ್ವೀಕರಿಸಿದ್ದಾರೆ ಎಂದು ಡಿಎಚ್‌ಓ ಡಾ. ನಾಗಭೂಷಣ ಉಡುಪ ತಿಳಿಸಿದ್ದಾರೆ.

ಲಸಿಕೆ ಪಡೆದವರಲ್ಲಿ 18 ವರ್ಷದಿಂದ 44 ವರ್ಷದೊಳಗಿನ 25 ಮಂದಿ ಮೊದಲ ಡೋಸ್ ಹಾಗೂ 291 ಮಂದಿ ಎರಡನೇ ಡೋಸ್ ಲಸಿಕೆಯನ್ನು ಸ್ವೀಕರಿಸಿದರೆ, 45 ವರ್ಷ ಮೇಲಿನ 13 ಮಂದಿ ಮೊದಲ ಡೋಸ್ ಹಾಗೂ 156 ಮಂದಿ ಎರಡನೇ ಡೋಸ್ ಪಡೆದಿದ್ದಾರೆ. ಅಲ್ಲದೇ ಒಬ್ಬ ಮುಂಚೂಣಿ ಕಾರ್ಯಕರ್ತ ಸಹ ಎರಡನೇ ಡೋಸ್ ಲಸಿಕೆ ಸ್ವೀಕರಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News