×
Ad

ನ.22ರಂದು ಎಂಯುಪಿಯ ಎರಡು ಹೊಸ ಕೃತಿಗಳ ಬಿಡುಗಡೆ

Update: 2021-11-21 21:41 IST

ಉಡುಪಿ, ನ.21: ಮಣಿಪಾಲ ಅಕಾಡೆಮಿ ಆಫ್ ಹೈಯರ್ ಎಜುಕೇಶನ್ ಸಂಸ್ಥೆಯ ಪ್ರಸಾರಾಂಗ ವಿಭಾಗವಾದ ಮಣಿಪಾಲ ಯೂನಿವರ್ಸಲ್ ಪ್ರೆಸ್‌ನ ಎರಡು ಹೊಸ ಪ್ರಕಟಣೆಗಳು ನ.22ರ ಸಂಜೆ ಎಂಜಿಎಂ ಕಾಲೇಜಿನ ನೂತನ ರವೀಂದ್ರ ಮಂಟಪದಲ್ಲಿ ಬಿಡುಗಡೆಗೊಳ್ಳಲಿವೆ.

ಪಿ.ಆರ್. ಪಂಚಮುಖಿ ಅವರ ‘ಸಾಮಾಜಿಕ ಸಮನ್ವಯದ ಹರಿಕಾರ- ಕನಕದಾಸರು’ ಹಾಗೂ ಡಾ.ಎನ್.ತಿರುಮಲೇಶ್ವರ ಭಟ್ ಇವರ ‘ಭಾಷಾಂತರ: ಜಿಜ್ಞಾಸೆ ಮತ್ತು ಪ್ರಾತ್ಯಕ್ಷಿಕೆ’ ಕೃತಿಗಳು ನ.22ರ ಸಂಜೆ 5 ಗಂಟೆಗೆ ಎಂಜಿಎಂ ಕಾಲೇಜಿನಲ್ಲಿ ನಡೆಯುವ ಕನಕ ಜಯಂತಿಯ ಸಂದರ್ಭದಲ್ಲಿ ಕಾಲೇಜಿನ ನೂತನ ರವೀಂದ್ರ ಮಂಟಪದಲ್ಲಿ ಲೋಕಾರ್ಪಣೆಗೊಳ್ಳುತ್ತಿವೆ.

ಮಾಹೆಯ ಕುಲಪತಿಗಳಾದ ಲೆ. ಜ. ಡಾ.ಎಂ.ಡಿ. ವೆಂಕಟೇಶ್ ಮತ್ತು ಕಾರ್ಯನಿರ್ವಾಹಕ ಉಪಾಧ್ಯಕ್ಷ ಡಾ.ಎಚ್.ವಿನೋದ ಭಟ್ ಎರಡು ಕೃತಿಗಳನ್ನು ಬಿಡುಗಡೆಗೊಳಿಸಲಿದ್ದಾರೆ. ಬಳಿಕ ಕೃತಿಗಳ ಕುರಿತು ಸಂವಾದ ಗೋಷ್ಠಿ ನಡೆಯಲಿದೆ. ಲೇಖಕರಾದ ಪ್ರೊ. ಪಿ. ಆರ್.ಪಂಚಮುಖಿ, ಪ್ರೊ. ಎನ್.ಟಿ. ಭಟ್ ಮತ್ತು ಸಂಪನ್ಮೂಲ ವ್ಯಕ್ತಿಗಳಾಗಿ ಡಾ.ಪಾದೇಕಲ್ಲು ವಿಷ್ಣು ಭಟ್ ಹಾಗೂ ಡಾ. ಪಾರ್ವತಿ ಜಿ. ಐತಾಳ್ ಅವರು ಪಾಲ್ಗೊಳ್ಳಲಿದ್ದಾರೆ ಎಂದು ಮಣಿಪಾಲ ಯೂನಿವರ್ಸಲ್ ಪ್ರೆಸ್‌ನ ಪ್ರಧಾನ ಸಂಪಾದಕಿ ಪ್ರೊ.ನೀತಾ ಇನಾಂದಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News