ಜಮೀಯ್ಯತುಲ್ ಫಲಾಹ್ ಬಂಟ್ವಾಳ ತಾಲೂಕು ಘಟಕದಿಂದ ವಿದ್ಯಾರ್ಥಿ ವೇತನ ವಿತರಣೆ

Update: 2021-11-21 17:13 GMT

ಬಂಟ್ವಾಳ : ಸಮುದಾಯದ ಶೈಕ್ಷಣಿಕ ಸಬಲೀಕರಣ ಮಾಡುವ ಮೂಲಕ ಸಮುದಾಯದ ಸಮಸ್ಯೆಗಳನ್ನು ತಳಮಟ್ಟದಿಂದ  ಪರಿಹರಿಸಲು ಸಾಧ್ಯ ಎಂದು ದ.ಕ ಮತ್ತು ಉಡುಪಿ‌ ಜಿಲ್ಲಾ ಜಮೀಯ್ಯತುಲ್ ಫಲಾಹ್ ಅಧ್ಯಕ್ಷ ಶಫಿ ಅಹ್ಮದ್ ಖಾಝಿ ಅಭಿಪ್ರಾಯಪಟ್ಟರು.

ಜಮೀಯ್ಯತುಲ್ ಫಲಾಹ್ ಬಂಟ್ವಾಳ ತಾಲೂಕು ಘಟಕದ ವತಿಯಿಂದ ಮೆಲ್ಕಾರ್ ಮಹಿಳಾ ಕಾಲೇಜಿನಲ್ಲಿ ನಡೆದ ವಿದ್ಯಾರ್ಥಿ ವೇತನ ವಿತರಣೆ ಹಾಗೂ ತರಬೇತಿ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಅವರು ಮಾತನಾಡಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಸಂಸ್ಥೆಯ ಬಂಟ್ವಾಳ ತಾಲೂಕು ಘಟಕಾದ್ಯಕ್ಷ ಹಾಜಿ ಎ.ಉಸ್ಮಾನ್ ಕರೋಪಾಡಿ ಮಾತನಾಡಿ ಮೂರು ದಶಕಗಳ ಹಿಂದೆ ಸಮುದಾಯದ ಸುಶಿಕ್ಷಿತ ದೂರದೃಷ್ಟಿಯಿದ್ದ ನಾಯಕರು ಹುಟ್ಟು ಹಾಕಿದ ಜಮೀಯ್ಯತುಲ್ ಫಲಾಹ್ ಸಂಸ್ಥೆಯು ಶೈಕ್ಷಣಿಕ ಜಾಗ್ರತಿಗಾಗಿ ಮಾಡಿರುವ ಸೇವೆ ಅಮೂಲ್ಯವಾದುದು ಎಂದರು.

ವಿಟ್ಲದ ವಿಠಲ ವಿದ್ಯಾ ಸಂಘದ ವಿದ್ಯಾ ಪೋಷಕ ಸಮಿತಿ ಅಧ್ಯಕ್ಷ ಬಾಬು ಕೊಪ್ಪಳ, ಮೆಲ್ಕಾರ್ ಮಹಿಳಾ ಕಾಲೇಜು ಪ್ರಾಂಶುಪಾಲ ಅಬ್ದುಲ್ ಲತೀಫ್ ಬಿ.ಕೆ ಮುಖ್ಯ ಅತಿಥಿಗಳಾಗಿ ಮಾತನಾಡಿದರು.

ಸಂಸ್ಥೆಯ ಕೋಶಾಧಿಕಾರಿ ಎಫ್.ಎಂ.ಬಶೀರ್, ಪೂರ್ವಾದ್ಯಕ್ಷರುಗಳಾದ ಬಿ.ಎ.ಮುಹಮ್ಮದ್ ಬಂಟ್ವಾಳ, ನೋಟರಿ ಅಬೂಬಕ್ಕರ್ ವಿಟ್ಲ, ಸದಸ್ಯರಾದ  ಬಿ.ಎಂ.ಅಬ್ಬಾಸ್ ಅಲಿ ಬೋಳಂತೂರು, ಕೆ.ಕೆ. ಸಾಹುಲ್ ಹಮೀದ್,  ಕೆ.ಎಸ್. ಮುಹಮ್ಮದ್ ಕಡೇಶ್ವಾಲ್ಯ, ಪಿ.ಮಹಮ್ಮದ್ ಪಾಣೆಮಂಗಳೂರು, ಶೇಖ್ ರಹ್ಮತುಲ್ಲಾ ಕಲಾಬಾಗಿಲು, ಸೈಯ್ಯದ್ ಇರಾ, ಮುಹಮ್ಮದ್ ನಾರಂಕೋಡಿ ಮೊದಲಾದವರು ಉಪಸ್ಥಿತರಿದ್ದರು.

ಜಮೀಯ್ಯತುಲ್ ಫಲಾಹ್  ಬಂಟ್ವಾಳ ಘಟಕದ ಪ್ರಧಾನ ಕಾರ್ಯದರ್ಶಿ ಎಂ.ಎಚ್. ಇಕ್ಬಾಲ್ ಸ್ವಾಗತಿಸಿ, ಕಾರ್ಯದರ್ಶಿ ಅಬ್ದುಲ್ ರಝಾಕ್ ಮಾಸ್ಟರ್ ಪ್ರಸ್ತಾವನೆಗೈದರು. ಪತ್ರಿಕಾ ಕಾರ್ಯದರ್ಶಿ ಸುಲೈಮಾನ್ ಸೂರಿಕುಮೇರು ವಂದಿಸಿ, ಉಪಾಧ್ಯಕ್ಷ ರಶೀದ್ ವಿಟ್ಲ ವಿದ್ಯಾರ್ಥಿ ವೇತನ ಫಲಾನುಭವಿಗಳ ಪಟ್ಟಿ ವಾಚಿಸಿದರು. ಸಂಘಟನಾ ಕಾರ್ಯದರ್ಶಿ ಲತೀಫ್ ನೇರಳಕಟ್ಟೆ ಕಾರ್ಯಕ್ರಮ ನಿರೂಪಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News