ವಿವಾದಾತ್ಮಕ 3 ರಾಜಧಾನಿ ಮಸೂದೆಯನ್ನು ಹಿಂಪಡೆಯಲು ಆಂಧ್ರಪ್ರದೇಶ ನಿರ್ಧಾರ

Update: 2021-11-22 09:13 GMT

ಅಮರಾವತಿ: ಆಂಧ್ರಪ್ರದೇಶದ ರಾಜ್ಯ ಸರಕಾರವು ವಿವಾದಾತ್ಮಕ ಮೂರು ರಾಜಧಾನಿ ಮಸೂದೆಯನ್ನು ಹಿಂಪಡೆಯಲು ನಿರ್ಧರಿಸಿದೆ. ಮೂರು ರಾಜಧಾನಿಯ ಮಸೂದೆಗೆ ಹಲವಾರು ವಲಯಗಳಿಂದ ಭಾರೀ ಪ್ರತಿರೋಧ ವ್ಯಕ್ತವಾದ ಕಾರಣ ಈ ತೀರ್ಮಾನ ಕೈಗೊಳ್ಳಲಾಗಿದೆ ಎಂದು NDTV ವರದಿ ಮಾಡಿದೆ.

ಕಾರ್ಯಕಾರಿ ರಾಜಧಾನಿ ವೈಝಾಗ್, ಶಾಸಕಾಂಗ ರಾಜಧಾನಿ ಅಮರಾವತಿ, ನ್ಯಾಯಾಂಗ ರಾಜಧಾನಿ ಕರ್ನೂಲ್ ಎನ್ನುವುದಾಗಿ ಮೂರು ರಾಜಧಾನಿಗಳನ್ನು ಮಸೂದೆಯಲ್ಲಿ ಪ್ರಸ್ತಾಪಿಸಲಾಗಿದೆ .  

ಮುಖ್ಯಮಂತ್ರಿ ವೈಎಸ್ ಜಗನ್ ಮೋಹನ್ ರೆಡ್ಡಿ ಅವರು ರಾಜ್ಯ ವಿಧಾನಸಭೆಯಲ್ಲಿ ಪ್ರಮುಖ ಘೋಷಣೆ ಮಾಡುವ ನಿರೀಕ್ಷೆಯಿದೆ.

ತ್ರಿವಿಧೀಕರಣ ಮಸೂದೆಯನ್ನು  ಪ್ರಶ್ನಿಸಿ ಹೈಕೋರ್ಟ್‌ನಲ್ಲಿ ಹಲವು ಅರ್ಜಿಗಳು ಸಲ್ಲಿಕೆಯಾಗಿದ್ದವು

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News