×
Ad

ನೋಯ್ಡಾದಲ್ಲಿ ಗುರುವಾರ ವಿಮಾನ ನಿಲ್ದಾಣಕ್ಕೆ ಪ್ರಧಾನಿ ಶಂಕುಸ್ಥಾಪನೆ

Update: 2021-11-22 17:24 IST

ಹೊಸದಿಲ್ಲಿ: ಮೂರು ವಿವಾದಾತ್ಮಕ ಕೃಷಿ ಕಾನೂನುಗಳನ್ನು ಹಿಂತೆಗೆದುಕೊಳ್ಳುವ ನಿರ್ಧಾರವನ್ನು ಘೋಷಿಸಿದ ನಂತರ ಪ್ರಧಾನಿ ನರೇಂದ್ರ ಮೋದಿ ಅವರು ಗುರುವಾರ ಪಶ್ಚಿಮ ಉತ್ತರ ಪ್ರದೇಶದಲ್ಲಿ ತಮ್ಮ ಮೊದಲ ಸಾರ್ವಜನಿಕ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದು,ನೋಯ್ಡಾದಲ್ಲಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ.

ಗುರುವಾರ ಮೋದಿ ಅವರು ಮಹೋಬಾ ಹಾಗೂ  ಝಾನ್ಸಿಯಲ್ಲಿ ಸಾರ್ವಜನಿಕ ಸಭೆಗಳನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.

ಗೌತಮ್ ಬುದ್ಧ ನಗರ ಜಿಲ್ಲೆಯ ಜೆವಾರ್‌ನಲ್ಲಿರುವ ವಿಮಾನ ನಿಲ್ದಾಣವು ರಾಜ್ಯದ ಯೋಗಿ ಆದಿತ್ಯನಾಥ್ ಸರಕಾರದ ಪ್ರಮುಖ ಮೂಲಸೌಕರ್ಯ ಯೋಜನೆಯಾಗಿದೆ.

 2022 ರ ಆರಂಭದಲ್ಲಿ ಉತ್ತರಪ್ರದೇಶ ವಿಧಾನಸಭಾ ಚುನಾವಣೆಗಳನ್ನು ದೃಷ್ಟಿಯಲ್ಲಿಟ್ಟುಕೊಂಡು ವಿಮಾನ ನಿಲ್ದಾಣದ ಶಂಕುಸ್ಥಾಪನೆ ಮಾಡಲಾಗುತ್ತಿದೆ ಎಂದು ವರದಿಯಾಗಿದೆ.

ಕಳೆದ ಒಂದು ವರ್ಷದಿಂದ ರೈತರ ಬೃಹತ್ ಪ್ರತಿಭಟನೆಗೆ ಕಾರಣವಾದ ಮೂರು ಕೇಂದ್ರ ಕೃಷಿ ಕಾನೂನು ಗಳನ್ನು ರದ್ದುಗೊಳಿಸುವ ನಿರ್ಧಾರವನ್ನು ಪ್ರಧಾನಿ ಮೋದಿ ಶುಕ್ರವಾರ ಪ್ರಕಟಿಸಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News