ವಿಧಾನ ಪರಿಷತ್ ಚುನಾವಣೆ: ಜೆಡಿಎಸ್ ಅಭ್ಯರ್ಥಿಗಳ ಪಟ್ಟಿ ಪ್ರಕಟ
Update: 2021-11-23 08:06 IST
ಬೆಂಗಳೂರು : ವಿಧಾನ ಪರಿಷತ್ ಚುನಾವಣೆಗೆ ಜಾತ್ಯತೀತ ಜನತಾ ದಳ (ಜೆಡಿಎಸ್) ಪಕ್ಷದ ಅಭ್ಯರ್ಥಿಗಳನ್ನು ಘೋಷಣೆ ಮಾಡಿದೆ.
ಕರ್ನಾಟಕ ವಿಧಾನ ಪರಿಷತ್‌ನ 25 ಸ್ಥಾನಗಳಿಗೆ ಚುನಾವಣೆ ಘೋಷಣೆಯಾಗಿದ್ದು, ಡಿಸೆಂಬರ್ 10ರಂದು ಚುನಾವಣೆ ನಡೆಯಲಿದೆ. ಡಿಸೆಂಬರ್ 14ರಂದು ಫಲಿತಾಂಶ ಪ್ರಕಟವಾಗಲಿದ್ದು, ನಾಮಪತ್ರಗಳನ್ನು ಸಲ್ಲಿಕೆ ಮಾಡಲು ಇಂದು (ಮಂಗಳವಾರ) ಕೊನೆಯ ದಿನವಾಗಿದೆ.
ಸ್ಥಳೀಯ ಸಂಸ್ಥೆಗಳಿಂದ ವಿಧಾನ ಪರಿಷತ್ ಸದಸ್ಯರನ್ನು ಆಯ್ಕೆ ಮಾಡಲು ಚುನಾವಣೆ ನಡೆಯುತ್ತಿದೆ.
ವಿಧಾನ ಪರಿಷತ್ ಚುನಾವಣೆಗೆ ಜೆಡಿಎಸ್ ಅಭ್ಯರ್ಥಿಗಳ ಪಟ್ಟಿಯನ್ನು ರಾಜ್ಯಾಧ್ಯಕ್ಷ ಎಚ್.ಕೆ. ಕುಮಾರಸ್ವಾಮಿ ಬಿಡುಗಡೆ ಮಾಡಿದ್ದಾರೆ.
ಅಪ್ಪಾಜಿ ಗೌಡ (ಮಂಡ್ಯ), ಅನಿಲ್ ಕುಮಾರ (ತುಮಕೂರು), ಸಿ.ಎನ್. ಮಂಜೇಗೌಡ (ಮೈಸೂರು), ವಕ್ಕಲೇರಿ ರಾಮು (ಕೋಲಾರ), ಎಚ್.ಎಂ. ರಮೇಶ್ ಗೌಡ (ಬೆಂಗಳೂರು ಗ್ರಾಮಾಂತರ), ಎಚ್.ಯು. ಇಸಾಕ್ ಖಾನ್ (ಕೊಡಗು), ಸೂರಜ್ ರೇವಣ್ಣ (ಹಾಸನ) ಇವರುಗಳು ಜೆಡಿಎಸ್ ಪಕ್ಷದ ಅಧಿಕೃತ ಅಭ್ಯರ್ಥಿಗಳಾಗಿದ್ದಾರೆ.