×
Ad

ಬೆಂಗಳೂರಿನ ಮಳೆ ಹಾನಿ ಪ್ರದೇಶಗಳಿಗೆ ಸಿಎಂ ಬೊಮ್ಮಾಯಿ ಭೇಟಿ

Update: 2021-11-23 12:09 IST
photo: twitter@CMofKarnataka
 

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ರವಿವಾರ ರಾತ್ರಿ ಸುರಿದ ಧಾರಾಕಾರ ಮಳೆಯಿಂದ ಅಪಾರ ಆಸ್ತಿ ಪಾಸ್ತಿ ಹಾನಿ ಸಂಭವಿಸಿದ್ದು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭೇಟಿ ನೀಟಿ ಪರಿಶೀಲಿಸಿದ್ದಾರೆ.

ನಗರದ ಯಲಹಂಕ ವಲಯದ ಕೇಂಪೇಗೌಡ ವಾರ್ಡ್ ನಲ್ಲಿ ಕೇಂದ್ರೀಯ ವಿಹಾರ ಅಪಾರ್ಟ್ಮ್ ಮೆಂಟ್ ಪರಿಶೀಲನೆ ನಡೆಸಿದ ಮುಖ್ಯಮಂತ್ರಿ ಬೊಮ್ಮಾಯಿ, ಮಳೆ ಹಾನಿ ಕುರಿತು ಸಂಪೂರ್ಣ ವರದಿ ನೀಡುವಂತೆ ಬಿಬಿಎಂಪಿ ಮುಖ್ಯ ಆಯುಕ್ತ ಗೌರವ್ ಗುಪ್ತಾಗೆ ಸೂಚಿಸಿದ್ದಾರೆ. 

ಯಲಹಂಕ ಶಾಸಕ ಎಸ್.ಆರ್ ವಿಶ್ವನಾಥ್, ಬಿಬಿಎಂಪಿ ಅಧಿಕಾರಿಗಳು ಇದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News