×
Ad

ಗಲ್ವಾನ್ ಹೀರೋ ಕರ್ನಲ್ ಸಂತೋಷ್ ಬಾಬು ಅವರಿಗೆ ಮರಣೋತ್ತರ ಮಹಾವೀರ ಚಕ್ರ ಪ್ರದಾನ

Update: 2021-11-23 13:06 IST
Photo: Times of india

ಹೊಸದಿಲ್ಲಿ: ಕಳೆದ ವರ್ಷ ಜೂನ್ 15 ರಂದು ಪೂರ್ವ ಲಡಾಖ್‌ನ ಗಲ್ವಾನ್ ಕಣಿವೆಯಲ್ಲಿ ಚೀನಾ ಸೈನಿಕರೊಂದಿಗಿನ ಘರ್ಷಣೆಯಲ್ಲಿ  ಕರ್ತವ್ಯದಲ್ಲಿದ್ದಾಗ ಸಾವನ್ನಪ್ಪಿದ 20 ಸೈನಿಕರಲ್ಲಿ 16 ಬಿಹಾರ ರೆಜಿಮೆಂಟ್‌ನ ಕಮಾಂಡಿಂಗ್ ಆಫೀಸರ್ ಕರ್ನಲ್ ಬಿಕುಮಲ್ಲ ಸಂತೋಷ್ ಬಾಬು ಸೇರಿದ್ದಾರೆ.  ಇಂದು  ಅವರಿಗೆ ಮರಣೋತ್ತರವಾಗಿ ಎರಡನೇ ಅತ್ಯುನ್ನತ ಯುದ್ಧಕಾಲದ ಶೌರ್ಯ ಗೌರವ ಮಹಾವೀರ ಚಕ್ರವನ್ನು ನೀಡಲಾಯಿತು.

ದಿವಂಗತ ಕರ್ನಲ್ ಅವರ ಪತ್ನಿ ಹಾಗೂ  ತಾಯಿ ಗೌರವ ಸ್ವೀಕರಿಸಲು ರಾಷ್ಟ್ರಪತಿ ಭವನದಲ್ಲಿ ಉಪಸ್ಥಿತರಿದ್ದರು. ರಾಷ್ಟ್ರಪತಿ ರಾಮನಾಥ್ ಕೋವಿಂದ್  ಪ್ರಶಸ್ತಿಯನ್ನು ಪ್ರದಾನಿಸಿದರು.

ಪ್ರಧಾನಿ ನರೇಂದ್ರ ಮೋದಿ, ರಕ್ಷಣಾ ಸಚಿವ ರಾಜನಾಥ್ ಸಿಂಗ್ ಸೇರಿದಂತೆ ಹಲವು ಗಣ್ಯರು ಸಮಾರಂಭದಲ್ಲಿ ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News