ಬೆಂಗಳೂರು: ಮೂರನೇ ಮಹಡಿಯಿಂದ ಜಿಗಿದು ಎಸೆಸೆಲ್ಸಿ ವಿದ್ಯಾರ್ಥಿನಿ ಆತ್ಮಹತ್ಯೆ
Update: 2021-11-23 20:05 IST
ಬೆಂಗಳೂರು, ನ.23: ಎಸೆಸೆಲ್ಸಿ ವಿದ್ಯಾರ್ಥಿನಿ ಮನೆಯ ಮೂರನೆ ಮಹಡಿಯಿಂದ ಜಿಗಿದು ಸಾವನ್ನಪ್ಪಿರುವ ಘಟನೆ ವರದಿಯಾಗಿದ್ದು, ಈ ಸಂಬಂಧ ಕಾಟನ್‍ಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಅಕ್ಕಿಪೇಟೆ ನಿವಾಸಿ ದೂದ್ ರಾಮ್ ಮಾಲಿ ಎಂಬುವರ ಪುತ್ರಿ ಸಾವನ್ನಪ್ಪಿರುವುದಾಗಿ ಎಂದು ತಿಳಿದುಬಂದಿದೆ.
ಸೋಮವಾರ ರಾತ್ರಿ 9:30ಕ್ಕೆ ಈ ಘಟನೆ ನಡೆದಿದ್ದು, ಘಟನೆ ಸಂಬಂಧ ಕಾಟನ್ ಪೇಟೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ. ಬಳಿಕ ಅನುಮಾನಾಸ್ಪದ ಸಾವು ಎಂದು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.
ಬಾಲಕಿಯ ಮೊಬೈಲ್ ಸಂಖ್ಯೆ ಇನ್ನಿತರೆ ಮಾಹಿತಿ ಕಲೆ ಹಾಕುತ್ತಿದ್ದಾರೆ. ಮೂಲಗಳ ಮಾಹಿತಿ ಪ್ರಕಾರ ಬಾಲಕಿ ಹಲವು ದಿನಗಳಿಂದ ಸಹಪಾಠಿ ಬಾಲಕನನ್ನು ಪ್ರೀತಿಸುತ್ತಿದ್ದಳು. ಇದಕ್ಕೆ ಆತ ಒಲ್ಲೆ ಎಂದಿದ್ದ ಎಂದು ತಿಳಿದುಬಂದಿದೆ.
ಘಟನೆ ನಂತರ ದೂದ್ ರಾಮ್ ಮಾಲಿ, ಪುತ್ರಿಯ ಸ್ನೇಹಿತನ ವಿರುದ್ಧ ದೂರು ನೀಡಿದ್ದು, ಮಗಳ ಸಾವಿನ ಹಿಂದೆ ಆತನ ಕೈವಾಡವಿದೆ ಎಂದು ಆರೋಪಿಸಿದ್ದಾರೆ.