2 ಸಾರ್ವಜನಿಕ ವಲಯದ ಬ್ಯಾಂಕ್ ಗಳನ್ನು ಖಾಸಗೀಕರಣಗೊಳಿಸುವ ಮಸೂದೆ ಮಂಡನೆಗೆ ಕೇಂದ್ರ ಸಿದ್ಧತೆ

Update: 2021-11-24 05:22 GMT

ಹೊಸದಿಲ್ಲಿ: ಎರಡು ಸಾರ್ವಜನಿಕ ವಲಯದ ಬ್ಯಾಂಕ್‌ಗಳನ್ನು ಖಾಸಗೀಕರಣಗೊಳಿಸುವ ಗುರಿಯನ್ನು ಹೊಂದಿರುವ ಕೇಂದ್ರ ಸರಕಾರವು ಮುಂಬರುವ ನವೆಂಬರ್ 29 ರಿಂದ ಪ್ರಾರಂಭವಾಗುವ ಸಂಸತ್ತಿನ ಚಳಿಗಾಲದ ಅಧಿವೇಶನದಲ್ಲಿ ಬ್ಯಾಂಕಿಂಗ್ ಕಾನೂನುಗಳ (ತಿದ್ದುಪಡಿ) ಮಸೂದೆ 2021 ಅನ್ನು ಮಂಡಿಸಲು ಸಿದ್ಧತೆ ನಡೆಸಿಕೊಂಡಿದೆ ಎಂದು ndtv.com ವರದಿ ಮಾಡಿದೆ

ಅಧಿವೇಶನದಲ್ಲಿ ಮಂಡಿಸಲು ಉದ್ದೇಶಿಸಲಾದ 26 ಮಸೂದೆಗಳ ಪಟ್ಟಿಯಲ್ಲಿ ಪ್ರಸ್ತಾವಿತ ಮಸೂದೆಯೂ ಸೇರಿದೆ.

ಮಸೂದೆಯ ಉದ್ದೇಶದ ಪ್ರಕಾರ, ಎರಡು ಸಾರ್ವಜನಿಕ ವಲಯದ ಬ್ಯಾಂಕ್‌ಗಳನ್ನು ಖಾಸಗೀಕರಣಗೊಳಿಸಲು 1970 ಮತ್ತು 1980 ಬ್ಯಾಂಕಿಂಗ್ ಕಂಪನಿಗಳ (ಅಂಡರ್‌ಟೇಕಿಂಗ್‌ಗಳ ಸ್ವಾಧೀನ ಮತ್ತು ವರ್ಗಾವಣೆ) ಕಾಯ್ದೆಗಳಲ್ಲಿ ತಿದ್ದುಪಡಿಗಳನ್ನು ಮಾಡಬೇಕಾಗಿದೆ. ಜೊತೆಗೆ ಪ್ರಾಸಂಗಿಕ ತಿದ್ದುಪಡಿಗಳನ್ನು ಮಾಡಬೇಕಾಗಿದೆ. ಅಧಿಕೃತ ಮೂಲಗಳ ಪ್ರಕಾರ ಮುಂಬರುವ ಚಳಿಗಾಲದ ಅಧಿವೇಶನದಲ್ಲಿ ಮಸೂದೆಯನ್ನು ಪರಿಚಯಿಸಲು, ಪರಿಗಣನೆಗೆ ಮತ್ತು ಅಂಗೀಕಾರಕ್ಕಾಗಿ ಪಟ್ಟಿ ಮಾಡಲಾಗಿದೆ ಎಂದು ವರದಿಯಾಗಿದೆ.

ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು 2021-22ರ ಕೇಂದ್ರ ಬಜೆಟ್ ಅನ್ನು ಮಂಡಿಸುವಾಗ ಪ್ರಸಕ್ತ ಹಣಕಾಸು ವರ್ಷದಲ್ಲಿ ರೂ. 1.75 ಲಕ್ಷ ಕೋಟಿ ಗಳಿಸುವ ಸರಕಾರದ ಬಂಡವಾಳ ಹಿಂತೆಗೆದ ಅಭಿಯಾನದ ಭಾಗವಾಗಿ ಎರಡು ಸಾರ್ವಜನಿಕ ವಲಯದ ಬ್ಯಾಂಕ್‌ಗಳನ್ನು ಖಾಸಗೀಕರಣಗೊಳಿಸುವುದಾಗಿ ಘೋಷಿಸಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News