ತನಿಖಾ ತಂಡವು ಸೇನೆಯ ಹೇಳಿಕೆ ದಾಖಲಿಸಿಲ್ಲ: ಸುಪ್ರೀಂ ಕೋರ್ಟ್‌ಗೆ ತಿಳಿಸಿದ ಝಕಿಯಾ ಜಾಫ್ರಿ

Update: 2021-11-24 07:02 GMT
ಝಕಿಯಾ ಜಾಫ್ರಿ (File Photo: PTI)

ಅಹಮದಾಬಾದ್: 2002ರ ಗುಜರಾತ್ ಗಲಭೆ ಪ್ರಕರಣದಲ್ಲಿ ಸೇನೆಯ ಹೇಳಿಕೆಯನ್ನು ವಿಶೇಷ ತನಿಖಾ ತಂಡ ದಾಖಲಿಸಿಕೊಂಡಿಲ್ಲ ಎಂದು ಕಾಂಗ್ರೆಸ್ ನಾಯಕ ಎಹ್ಸಾನ್ ಜಾಫ್ರಿ ಅವರ ಪತ್ನಿ ಝಕಿಯಾ ಜಾಫ್ರಿ ಮಂಗಳವಾರ ಸುಪ್ರೀಂ ಕೋರ್ಟ್‌ಗೆ ತಿಳಿಸಿದ್ದಾರೆ ಎಂದು 'ದಿ ಇಂಡಿಯನ್ ಎಕ್ಸ್‌ಪ್ರೆಸ್' ವರದಿ ಮಾಡಿದೆ.

2002 ರಲ್ಲಿ ಗುಜರಾತ್ ಮುಖ್ಯಮಂತ್ರಿಯಾಗಿದ್ದ ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ 64 ಜನರಿಗೆ ವಿಶೇಷ ತನಿಖಾ ತಂಡದ ಕ್ಲೀನ್ ಚಿಟ್ ನೀಡಿದ್ದನ್ನು ಸುಪ್ರೀಂ ಕೋರ್ಟ್‌ನಲ್ಲಿ ಜಾಫ್ರಿ ಪ್ರಶ್ನಿಸಿದ್ದಾರೆ. ಗುಂಪೊಂದು ಫೆಬ್ರವರಿ 28, 2002 ರಂದು ಅಹಮದಾಬಾದ್‌ನ ಗುಲ್ಬರ್ಗ್ ಸೊಸೈಟಿಯಲ್ಲಿ ಹಿಂಸಾಚಾರ, ಕಲ್ಲು ತೂರಾಟ ಮತ್ತು ಮನೆಗಳಿಗೆ ಬೆಂಕಿ ಹಚ್ಚಿದ ಪ್ರಕರಣದಲ್ಲಿ ಹತ್ಯೆಯಾದ 69 ಜನರಲ್ಲಿ ಅರ್ಜಿದಾರರ ಪತಿಯೂ ಸೇರಿದ್ದಾರೆ.

ಮಂಗಳವಾರ ನ್ಯಾಯಮೂರ್ತಿಗಳಾದ ಎ.ಎಂ. ಖಾನ್ವಿಲ್ಕರ್, ದಿನೇಶ್ ಮಹೇಶ್ವರಿ ಮತ್ತು ಸಿ.ಟಿ. ರವಿಕುಮಾರ್ ಅವರ ಪೀಠವು ಝಕಿಯಾ ಜಾಫ್ರಿ ಪರವಾಗಿ ಹಿರಿಯ ವಕೀಲ ಕಪಿಲ್ ಸಿಬಲ್ ಅವರ ವಾದವನ್ನು ಆಲಿಸಿತು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News