×
Ad

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಭೇಟಿ ಮಾಡಿದ ಬಿಜೆಪಿ ಸಂಸದ ಸುಬ್ರಮಣಿಯನ್ ಸ್ವಾಮಿ

Update: 2021-11-24 17:35 IST

Photo: Twitter/@AITCofficial

ಹೊಸದಿಲ್ಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ದಿಲ್ಲಿಗೆ ಭೇಟಿ ನೀಡಿದ್ದು  ಬುಧವಾರ ರಾಷ್ಟ್ರ ರಾಜಧಾನಿಯಲ್ಲಿ ಬಿಜೆಪಿ ಸಂಸದ ಸುಬ್ರಮಣಿಯನ್ ಸ್ವಾಮಿ ಅವರನ್ನು ಭೇಟಿ ಮಾಡಿದರು. ತೃಣಮೂಲ ಕಾಂಗ್ರೆಸ್ ಪಕ್ಷವು ತನ್ನ ಅಧಿಕೃತ ಟ್ವಿಟರ್ ಖಾತೆಯಲ್ಲಿ ಇಬ್ಬರು ರಾಜಕೀಯ ನಾಯಕರ ಭೇಟಿಯ ಚಿತ್ರವನ್ನು ಹಂಚಿಕೊಂಡಿದೆ.

ಇಂದು ಸಂಜೆ 5 ಗಂಟೆಗೆ ದಿಲ್ಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡುವ ಮೊದಲು ಪಶ್ಚಿಮ ಬಂಗಾಳ ಸಿಎಂ ಸ್ವಾಮಿ ಅವರನ್ನು ಭೇಟಿಯಾದರು.

ಕಳೆದ ತಿಂಗಳು ಬಿಜೆಪಿಯ ರಾಷ್ಟ್ರೀಯ ಕಾರ್ಯಕಾರಿ ಸಮಿತಿಯಿಂದ ಕೈಬಿಡಲಾಗಿದ್ದ ಸ್ವಾಮಿ ಈ ಹಿಂದೆ ಹಲವು ಸಂದರ್ಭಗಳಲ್ಲಿ ಟಿಎಂಸಿ ವರಿಷ್ಠೆಯನ್ನು ಹೊಗಳಿದ್ದರು.

ಬಿಜೆಪಿ ಸಂಸದ ಸುಬ್ರಮಣಿಯನ್ ಸ್ವಾಮಿ ಅಕ್ಟೋಬರ್‌ನಲ್ಲಿ ನಡೆಯಲಿರುವ ಜಾಗತಿಕ ಶಾಂತಿ ಸಮ್ಮೇಳನದಲ್ಲಿ ಭಾಗವಹಿಸಲು ರೋಮ್‌ಗೆ ಭೇಟಿ ನೀಡಲು ಪಶ್ಚಿಮ ಬಂಗಾಳದ ಸಿಎಂಗೆ ಅನುಮತಿ ನಿರಾಕರಿಸಿದ್ದಕ್ಕಾಗಿ ಅವರು ಕೇಂದ್ರವನ್ನು ಇತ್ತೀಚೆಗೆ ಟೀಕಿಸಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News