ಕಾರು- ಬೈಕ್ ಢಿಕ್ಕಿ: ಇಬ್ಬರು ಸ್ಥಳದಲ್ಲೇ ಮೃತ್ಯು
Update: 2021-11-24 18:35 IST
ಚಾಮರಾಜನಗರ: ಕಾರು ಮತ್ತು ಬೈಕ್ ನಡುವೆ ಢಿಕ್ಕಿ ಹೊಡೆದ ಪರಿಣಾಮ ಬೈಕಿನಲ್ಲಿದ್ದ ಇಬ್ಬರು ಸವಾರರು ಸ್ಥಳದಲ್ಲೇ ಮೃತಪಟ್ಟ ಘಟನೆ ಬುಧವಾರ ಸಂಜೆ ನಡೆದಿದೆ.
ಚಾಮರಾಜನಗರ ತಾಲೂಕಿನ ಪಣ್ಯದಹುಂಡಿ ಬಳಿ ಘಟನೆ ಸಂಭವಿಸಿದ್ದು, ಮೃತರನ್ನು ಬೇಡರಪುರ ಗ್ರಾಮದ ಮಹೇಶ್ ಮತ್ತು ಅಶೋಕ್ ಎಂದು ಗುರುತಿಸಲಾಗಿದೆ.
ಅಪಘಾತವಾಗಿರುವ ಬಗ್ಗೆ ಮಾಹಿತಿ ಪಡೆದ ಚಾಮರಾಜನಗರ ಗ್ರಾಮಾಂತರ ಪೊಲೀಸ್ ಠಾಣೆಯ ಪೊಲೀಸ್ ಅಧಿಕಾರಿಗಳು ಮತ್ತು ಪೊಲೀಸ್ ಅಧಿಕಾರಿಗಳು ಆಗಮಿಸಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.