×
Ad

'ಎತ್ತಿಗೆ ಜ್ವರ ಬಂದರೆ ಎಮ್ಮೆಗೆ ಬರೆ': ಎ. ಮಂಜು ವಿರುದ್ಧ ಬಿಜೆಪಿಯ ಶಿಸ್ತು ಕ್ರಮಕ್ಕೆ ಕಾಂಗ್ರೆಸ್ ವ್ಯಂಗ್ಯ

Update: 2021-11-24 20:03 IST

ಬೆಂಗಳೂರು: ಮಾಜಿ ಸಚಿವ ಎ. ಮಂಜು ವಿರುದ್ಧ ಬಿಜೆಪಿಯ ಶಿಸ್ತು ಕ್ರಮಕ್ಕೆ ವ್ಯಂಗ್ಯವಾಡಿರುವ ಕಾಂಗ್ರೆಸ್, 'ಎತ್ತಿಗೆ ಜ್ವರ ಬಂದರೆ ಎಮ್ಮೆಗೆ ಬರೆ' ಎಂದು ಟೀಕಿಸಿದೆ. 

ಕಾಂಗ್ರೆಸ್ ತೊರೆದು ಬಿಜೆಪಿ ಸೇರಿರುವ ಅರಕಲಗೂಡು ಕ್ಷೇತ್ರದ ಮಾಜಿ ಶಾಸಕ ಎ.ಮಂಜು ಅವರು ಬಿಜೆಪಿಯಲ್ಲಿ ಜವಾಬ್ದಾರಿಯುತ ಸ್ಥಾನದಲ್ಲಿದ್ದರೂ ಅವರ ಪುತ್ರ ಡಾ.ಮಂಥರ್ ಗೌಡ ವಿಧಾನ ಪರಿಷತ್ ಚುನಾವಣೆಗೆ ಕಾಂಗ್ರೆಸ್ ನಿಂದ ಕಣಕ್ಕಿಳಿದಿರುವುದು ಬಿಜೆಪಿ ನಾಯಕರು, ಕಾರ್ಯಕರ್ತರಲ್ಲಿ ಮುಜುಗರ ಉಂಟು ಮಾಡಿದ್ದು, ಎ.ಮಂಜುವನ್ನು ಪಕ್ಷದ ಎಲ್ಲ ಜವಾಬ್ದಾರಿಯಿಂದ ಬಿಜೆಪಿ ಬಿಡುಗಡೆಗೊಳಿಸಿತ್ತು.

ಇದೀಗ ಮಂಜು ವಿರುದ್ಧ ಶಿಸ್ತು ಕ್ರಮ ಕೈಗೊಂಡಿರುವ ಬಿಜೆಪಿ ನಡೆಯನ್ನು ಟೀಕಿಸಿರುವ ಕಾಂಗ್ರೆಸ್, 'ಎತ್ತಿಗೆ ಜ್ವರ ಬಂದರೆ ಎಮ್ಮೆಗೆ ಬರೆ' ಎಂಬಂತೆ ಮಂಥರ್ ಗೌಡ ಕಾಂಗ್ರೆಸ್‌ನಿಂದ ಸ್ಪರ್ಧಿಸುತ್ತಿರುವುದಕ್ಕೆ ಎ. ಮಂಜು ಅವರ ವಿರುದ್ಧ ಬಿಜೆಪಿಯ ಶಿಸ್ತು ಕ್ರಮ ಕೈಗೊಂಡಿದೆ. 

''ಲಖನ್ ಜಾರಕಿಹೊಳಿ ಬಂಡಾಯಕ್ಕೆ ಬಾಲಚಂದ್ರ ಹಾಗೂ ರಮೇಶ್ ಜಾರಕಿಹೊಳಿ ವಿರುದ್ಧವೂ ಇದೇ ಶಿಸ್ತು ಕ್ರಮ ಕೈಗೊಳ್ಳುವ ಧೈರ್ಯವಿದೆಯೇ ಬಿಜೆಪಿಗೆ? ಅಥವಾ ಉತ್ತರನ ಪುರುಷ ಒಲೆಯ ಮುಂದೆ ಮಾತ್ರವೇ?'' ಎಂದು ಪ್ರಶ್ನಿಸಿದೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News