ನ.27ರಂದು ಉಡುಪಿ ಜಿಲ್ಲಾ ಮಟ್ಟದ ಯುವಜನೋತ್ಸವ
Update: 2021-11-24 20:26 IST
ಉಡುಪಿ, ನ.24: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಡಾ.ಜಿ.ಶಂಕರ್ ಸರಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರ ಅಜ್ಜರಕಾಡು ಉಡುಪಿ, ಐಕ್ಯುಎಸಿ ಮತ್ತು ರಾಷ್ಟ್ರೀಯ ಸೇವಾ ಯೋಜನೆ ಇವರ ಸಹಯೋಗದೊಂದಿಗೆ ಜಿಲ್ಲಾ ಮಟ್ಟದ ಯುವಜನೋತ್ಸವ ಕಾರ್ಯಕ್ರಮ ನ.27ರಂದು ಬೆಳಗ್ಗೆ 9:30ಕ್ಕೆ ನಗರದ ಪುರಭವನದಲ್ಲಿ ನಡೆಯಲಿದೆ.
ಕಾರ್ಯಕ್ರಮವನ್ನು ಜಿಲ್ಲಾಧಿಕಾರಿ ಕೂರ್ಮರಾವ್ ಎಂ ಉದ್ಘಾಟಿಸಲಿದ್ದು, ಡಾ.ಜಿ.ಶಂಕರ್ ಸರಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರದ ಪ್ರಾಂಶುಪಾಲ ಡಾ. ಭಾಸ್ಕರ ಶೆಟ್ಟಿ ಅಧ್ಯಕ್ಷತೆ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಜಿಪಂ ಮುಖ್ಯ ಕಾರ್ಯ ನಿರ್ವಹಣಾ ಧಿಕಾರಿ ಡಾ. ನವೀನ್ ಭಟ್ ವೈ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎನ್. ವಿಷ್ಣುವರ್ಧನ್ ಭಾಗವಹಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.