ಡಿ.1ರಿಂದ ರಾಜ್ಯದ ಏಳು ಜಿಲ್ಲೆಯ ಶಾಲಾ ಮಕ್ಕಳಿಗೆ ಮೊಟ್ಟೆ, ಬಾಳೆ ಹಣ್ಣು ವಿತರಣೆ

Update: 2021-11-24 16:16 GMT

ಬೆಂಗಳೂರು, ನ.24: ರಾಜ್ಯದ ವಿಜಯಪುರ ಜಿಲ್ಲೆ ಒಳಗೊಂಡಂತೆ ಕಲ್ಯಾಣಕರ್ನಾಟಕದ ಜಿಲ್ಲೆಗಳ ಸರಕಾರಿ ಮತ್ತು ಸರಕಾರಿ ಅನುದಾನಿತ ಶಾಲೆಗಳಲ್ಲಿ ಓದುತ್ತಿರುವ ಮಕ್ಕಳಿಗೆ ಡಿ.1ರಿಂದ ಮಧ್ಯಾಹ್ನ ಮೊಟ್ಟೆ ಹಾಗೂ ಮೊಟ್ಟೆ ತಿನ್ನದ ಮಕ್ಕಳಿಗೆ ಬಾಳೆಹಣ್ಣು ನೀಡುವಂತೆ ಸಾರ್ವಜನಿಕ ಶಿಕ್ಷಣ ಇಲಾಖೆ ಆದೇಶ ಹೊಡಿಸಿದೆ. 

ರಾಜ್ಯದ ವಿಜಯಪುರ, ಬೀದರ್, ರಾಯಚೂರು, ಬಳ್ಳಾರಿ, ಕಲಬುರುಗಿ, ಯಾದಗಿರಿ, ಕೊಪ್ಪಳ ಜಿಲ್ಲೆಗಳಲ್ಲಿ ಮಕ್ಕಳು ಅಪೌಷ್ಠಿಕತೆಯಿಂದ ಬಳಲುತ್ತಿದ್ದು, ಪೌಷ್ಠಿಕ ಆಹಾರ ವಿತರಿಸುವ ಸಲುವಾಗಿ ಕೇಂದ್ರ ಮತ್ತು ರಾಜ್ಯ ಸರಕಾರದ ಅನುದಾನದಲ್ಲಿ 6 ರಿಂದ 15 ವರ್ಷದ ಮಕ್ಕಳಿಗೆ ಮೊಟ್ಟೆ ಮತ್ತು ಬಾಳೆಹಣ್ಣು ನೀಡಲಾಗುತ್ತಿದೆ ಎಂದು ಆದೆಶದಲ್ಲಿ ಉಲ್ಲೇಖಿಸಿದೆ.
 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News