ಮಂಗಳೂರು: ನಕಲಿ ಎಟಿಎಂ ಕಾರ್ಡ್ ಬಳಸಿ ಹಣ ಡ್ರಾ
Update: 2021-11-24 21:33 IST
ಮಂಗಳೂರು, ನ.24: ವಿವಿಧ ಬ್ಯಾಂಕ್‌ಗಳ ನಕಲಿ ಎಟಿಎಂ ಕಾರ್ಡ್ ಬಳಸಿ ಹಂತ ಹಂತವಾಗಿ 1,88,800 ರೂ. ಡ್ರಾ ಮಾಡಿ ವಂಚಿಸಿದ ಬಗ್ಗೆ ಸೆನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ವಿಶ್ವಕರ್ಮ ಸಹಕಾರ ಬ್ಯಾಂಕ್‌ನ ಕಾರ್ ಸ್ಟ್ರೀಟ್‌ನಲ್ಲಿರುವ ಎಟಿಎಂನಿಂದ ಹಣ ಡ್ರಾ ಮಾಡಲಾಗಿದೆ. ನ.20ರಂದು ಆರೋಪಿಯು ಎಟಿಎಂಗೆ ಬಂದು ಹಣ ಡ್ರಾ ಮಾಡಿದ್ದು, ಸಂಶಯಗೊಂಡ ವಾಚ್ ಮ್ಯಾನ್ ಆತನನ್ನು ಹಿಡಿಯಲು ಯತ್ನಿಸಿದಾಗ ತಪ್ಪಿಸಿಕೊಂಡು ಪರಾರಿಯಾಗಿದ್ದಾನೆ ಎನ್ನಲಾಗಿದೆ.
ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.