ಎಸ್ಸೆಸ್ಸೆಫ್ ದ.ಕ. ಜಿಲ್ಲಾ ಪ್ರತಿಭೋತ್ಸವ
ಮಂಗಳೂರು, ನ.24 : ಎಸ್ಸೆಸ್ಸೆಫ್ ದ.ಕ.ಜಿಲ್ಲಾ ವೆಸ್ಟ್ ವತಿಯಿಂದ ಪ್ರತಿಭೋತ್ಸವ ಕಾರ್ಯಕ್ರಮವು ಇತ್ತೀಚೆಗೆ ಸುರಿಬೈಲ್ ದಾರುಲ್ ಅಶ್‌ಅರಿಯ್ಯದಲ್ಲಿ ಎಸ್ಸೆಸ್ಸೆಫ್ ದ.ಕ.ಜಿಲ್ಲಾ ವೆಸ್ಟ್ ಅಧ್ಯಕ್ಷ ನವಾಝ್ ಸಖಾಫಿ ಅಡ್ಯಾರ್ ಪದವು ಅವರ ನೇತೃತ್ವದಲ್ಲಿ ಜರುಗಿತು.
ಎಸ್‌ವೈಎಸ್ ದ.ಕ. ಜಿಲ್ಲೆ ವೆಸ್ಟ್ ಕೋಶಾಧಿಕಾರಿ ಬಶೀರ್ ಹಾಜಿ ಬಿ.ಸಿ.ರೋಡ್ ಧ್ವಜಾರೋಹಣ ಮಾಡುವ ಮೂಲಕ ಕಾರ್ಯ ಕ್ರಮಕ್ಕೆ ಚಾಲನೆ ನೀಡಿದರು. ದಾರುಲ್ ಅಶ್‌ಅರಿಯ್ಯೆದ ಉಪಾಧ್ಯಕ್ಷ ಸೈಯದ್ ಶಿಹಾಬುದ್ದೀನ್ ತಂಙಳ್ ಮದಕ ದುಆಗೈದರು.
ಎಸ್‌ವೈಎಸ್‌ದ.ಕ. ಜಿಲ್ಲಾ ವೆಸ್ಟ್ ಅಧ್ಯಕ್ಷರೂ ಆಗಿರುವ ದಾರುಲ್ ಅಶ್‌ಅರಿಯ್ಯದ ಮ್ಯಾನೇಜರ್ ಸಿ.ಎಚ್.ಮುಹಮ್ಮದಲಿ ಸಖಾಫಿ ಕಾರ್ಯಕ್ರಮ ಉದ್ಘಾಟಿಸಿದರು. ಅತಿಥಿಯಾಗಿ ಶಾಸಕ ಯು.ಟಿ.ಖಾದರ್ ಭಾಗವಹಿಸಿದ್ದರು.
ಎಸ್ಸೆಸ್ಸೆಫ್ ದ.ಕ.ಜಿಲ್ಲಾ ವೆಸ್ಟ್ ವತಿಯಿಂದ ಹೊರತಂದ ಱದೃಷ್ಟಿ ಪ್ರತಿಭೋತ್ಸವ ಸ್ಪೆಷಲ್ ಬುಲೆಟಿನ್‌ನನ್ನು ಎಸ್ಸೆಸ್ಸೆಫ್ ರಾಜ್ಯ ಮಾಜಿ ಕಾರ್ಯದರ್ಶಿ ಸಿರಾಜುದ್ದೀನ್ ಸಖಾಫಿ ಕನ್ಯಾನ ಬಿಡುಗಡೆಗೊಳಿಸಿದರು. ಎರಡು ದಿನಗಳ ಕಾಲ ನಡೆದ ಪ್ರತಿಭೋತ್ಸವ ದಲ್ಲಿ 6 ಡಿವಿಷನ್‌ಗಳ 400ಕ್ಕೂ ಹೆಚ್ಚು ಸ್ಪರ್ಧಿಗಳು ಭಾಗವಹಿಸಿದ್ದರು. ಉಳ್ಳಾಲ ಡಿವಿಷನ್ ಮೊದಲ ಸ್ಥಾನವನ್ನು ತನ್ನದಾಗಿಸಿ ಕೊಂಡರೆ, ಮುಡಿಪು ಡಿವಿಷನ್ ಎರಡನೇ ಸ್ಥಾನವನ್ನು ಅಲಂಕರಿಸಿತು, ಸುರತ್ಕಲ್ ಡಿವಿಷನ್ ಮೂರನೇ ಸ್ಥಾನವನ್ನು ಪಡೆದುಕೊಂಡಿತು.
ಸಮಾರೋಪ ಸಮಾರಂಭದಲ್ಲಿ ಸೈಯದ್ ಮುಶ್ತಾಕುರ್ರಹ್ಮಾನ್ ತಂಙಳ್ ಚಟ್ಟೆಕಲ್ ದುಆಗೈದರು. ಎಸ್ಸೆಸ್ಸೆಫ್ ದ.ಕ.ಜಿಲ್ಲಾ ಕಲ್ಚರಲ್ ಕೌನ್ಸಿಲ್ ಕಾರ್ಯದರ್ಶಿ ಫಾರೂಕ್ ಸಖಾಫಿ ಕಾಟಿಪಳ್ಳ ಮಾತಾನಾಡಿದರು. ವೇದಿಕೆಯಲ್ಲಿ ಎಸ್ಸೆಸ್ಸೆಫ್ ದ.ಕ. ಜಿಲ್ಲಾ ವೆಸ್ಟ್ ಸದಸ್ಯರಾದ ಸೈಯದ್ ಖುಬೈಬ್ ತಂಙಳ್ ಉಳ್ಳಾಲ, ದಾರುಲ್ ಅಶ್‌ಅರಿಯ್ಯದ ಪ್ರಾಂಶುಪಾಲ ಅಬೂಬಕ್ಕರ್ ಬಾಖವಿ, ಎಸ್‌ವೈಎಸ್ ಕರ್ನಾಟಕ ರಾಜ್ಯ ಪ್ರಧಾನ ಕಾರ್ಯದರ್ಶಿ ಎಮ್ಮೆಸ್ಸೆಂ ಅಬ್ದುರ್ರಶೀದ್ ಝೈನಿ ಕಕ್ಕಿಂಜೆ, ಎಸ್‌ವೈಎಸ್ ಕರ್ನಾಟಕ ರಾಜ್ಯ ಕಾರ್ಯದರ್ಶಿ ಜಿ.ಎಂ. ಮುಹಮ್ಮದ್‌ಕಾಮಿಲ್ ಸಖಾಫಿ, ಕರ್ನಾಟಕ ರಾಜ್ಯ ಪ್ರತಿಭೋತ್ಸವ ಸಮಿತಿಯ ಅಧ್ಯಕ್ಷ ಮುಸ್ತಫಾ ನಈಮಿ ಹಾವೇರಿ,ಎಸ್ಸೆಸ್ಸೆಫ್ ಕರ್ನಾಟಕ ರಾಜ್ಯ ಪ್ರಧಾನ ಕಾರ್ಯದರ್ಶಿ ಇಸ್ಮಾಯಿಲ್ ಮಾಸ್ಟರ್ ಮರಿಕ್ಕಳ, ಎಸ್ಸೆಸ್ಸೆಫ್ ದ.ಕ. ಜಿಲ್ಲಾ ಮಾಜಿ ಅಧ್ಯಕ್ಷ ಇಸಾಾಕ್ ಝುಹ್ರಿ ಸೂರಿಂಜೆ, ಎಸ್ಸೆಸ್ಸೆಫ್ ಕರ್ನಾಟಕ ರಾಜ್ಯ ಕಾರ್ಯದರ್ಶಿ ಎನ್.ಸಿ.ರಹೀಂ ಉಡುಪಿ, ಎಸ್ಸೆಸ್ಸೆಫ್ ದ.ಕ. ಜಿಲ್ಲಾ ಮಾಜಿ ಅಧ್ಯಕ್ಷ ಇಬ್ರಾಹಿಂ ಸಖಾಫಿ ಸೆರ್ಕಳ, ಎಸ್ಸೆಸ್ಸೆಫ್ ದ.ಕ. ಜಿಲ್ಲಾ ಮಾಜಿ ಪ್ರಧಾನ ಕಾರ್ಯದರ್ಶಿ ಶರೀಫ್ ನಂದಾವರ, ಎಸ್ಸೆಸ್ಸೆಫ್ ದ.ಕ. ಜಿಲ್ಲಾ ವೆಸ್ಟ್ ಪ್ರತಿಭೋತ್ಸವ ಸಮಿತಿಯ ಅಧ್ಯಕ್ಷ ಆರೀಫ್ ಝುಹ್ರಿ ಮುಕ್ಕ ಉಪಸ್ಥಿತರಿದ್ದರು.
ಎಸ್ಸೆಸ್ಸೆಫ್ ದ.ಕ. ಜಿಲ್ಲಾ ವೆಸ್ಟ್ ಪ್ರಧಾನ ಕಾರ್ಯದರ್ಶಿ ಹೈದರ್ ಅಲಿ ಕಾಟಿಪಳ್ಳ ಸ್ವಾಗತಿಸಿದರು.ಎಸ್ಸೆಸ್ಸೆಫ್ ದ.ಕ.ಜಿಲ್ಲಾ ವೆಸ್ಟ್ ಪ್ರತಿಭೋತ್ಸವ ಸಮಿತಿಯ ಪ್ರಧಾನ ಸಂಚಾಲಕ ನೌಫಲ್ ಫರೀದ್ ನಗರ ವಂದಿಸಿದರು.