ತ್ರಿಪುರಾ ನಗರಾಡಳಿತ ಸಂಸ್ಥೆಗಳ ಚುನಾವಣೆಯಲ್ಲಿ ತಮ್ಮ ಅಭ್ಯರ್ಥಿಗಳಿಗೆ ಬೆದರಿಕೆ: ತೃಣಮೂಲ, ಸಿಪಿಎಂ ಆರೋಪ

Update: 2021-11-25 06:20 GMT

ಕೋಲ್ಕತ್ತಾ: ತ್ರಿಪುರಾ ನಗರಾಡಳಿತ ಸಂಸ್ಥೆಗಳ ಚುನಾವಣೆ ಇಂದು ಬೆಳಗ್ಗೆ 7 ಗಂಟೆಗೆ ಆರಂಭವಾಗಿದ್ದು ಆಡಳಿತಾರೂಢ ಬಿಜೆಪಿಯ ಕಾರ್ಯಕರ್ತರು ದ್ವಿಚಕ್ರ ವಾಹನದಲ್ಲಿ ಸಂಚರಿಸಿ ತಮ್ಮ ಅಭ್ಯರ್ಥಿಗಳನ್ನು ಬೆದರಿಸುತ್ತಿದ್ದಾರೆ ಎಂಬ ವಿರೋಧ ಪಕ್ಷ ಸಿಪಿಎಂ ಹಾಗೂ ತೃಣಮೂಲ ಕಾಂಗ್ರೆಸ್ ಆರೋಪಿಸಿವೆ

ಎಲ್ಲಾ ಮತದಾರರಿಗೆ ಮತಗಟ್ಟೆಗೆ ಪ್ರವೇಶಿಸಲು ಅವಕಾಶ ನೀಡುತ್ತಿಲ್ಲ ಎಂದೂ ಸಿಪಿಎಂ ಹಾಗೂ ತೃಣಮೂಲ ಕಾಂಗ್ರೆಸ್ ಆರೋಪಿಸಿವೆ.

ಮುಖಕ್ಕೆ ಮುಸುಕು ಹಾಕಿಕೊಂಡು ಹೆಲ್ಮೆಟ್ ಧರಿಸಿರುವ ಗ್ಯಾಂಗ್‌ಗಳು ಮನೆ ಮನೆಗೆ ತೆರಳಿ ಮತದಾರರನ್ನು ಮನೆಯಲ್ಲೇ ಇರುವಂತೆ ಎಚ್ಚರಿಸಿದ್ದಾರೆ ಎಂದು ವಿರೋಧ ಪಕ್ಷಗಳು ಆರೋಪಿಸಿವೆ.

ಅಗರ್ತಲಾ ಮುನ್ಸಿಪಲ್ ಕೌನ್ಸಿಲ್‌ನ ಹಲವಾರು ವಾರ್ಡ್‌ಗಳಿಂದ ಆಡಳಿತಾರೂಢ ಬಿಜೆಪಿಯ ಆಜ್ಞೆಯ ಮೇರೆಗೆ ಹೆಚ್ಚಿನ ಸಂಖ್ಯೆಯ ದುಷ್ಕರ್ಮಿಗಳು ಆ ಪ್ರದೇಶಗಳಿಗೆ ನುಗ್ಗುತ್ತಿದ್ದಾರೆ ಹಾಗೂ ಪ್ರತಿಪಕ್ಷದ ಬೆಂಬಲಿಗರನ್ನು ನವೆಂಬರ್ 25 ರಂದು ಮತದಾನ ಕೇಂದ್ರಗಳಿಗೆ ಹೋಗದಂತೆ ಭಯಭೀತಗೊಳಿಸುತ್ತಿದ್ದಾರೆ ಎಂಬ ಮಾಹಿತಿಯು ಹರಿಯುತ್ತಿದೆ ಎಂದು ಸಿಪಿಎಂ ಹೇಳಿಕೆಯಲ್ಲಿ ತಿಳಿಸಿದೆ.

ತೃಣಮೂಲ ಕಾಂಗ್ರೆಸ್ ತನ್ನ ಅಧಿಕೃತ ಹ್ಯಾಂಡಲ್‌ನಲ್ಲಿ ಟ್ವೀಟ್ ಮಾಡಿರುವ ವಿಡಿಯೋದಲ್ಲಿ ಕಪ್ಪು ಅಂಗಿ ಧರಿಸಿದ ವ್ಯಕ್ತಿಯೊಬ್ಬ ಇತರರಿಗೆ 'ಮತದಾನ' ಮಾಡುತ್ತಿರುವುದು ಕಂಡುಬಂದಿದೆ ಎಂದು ಆರೋಪಿಸಿದೆ.

ತ್ರಿಪುರಾದ 13 ನಗರ ಸಂಸ್ಥೆಗಳ 644 ಬೂತ್‌ಗಳಲ್ಲಿ ಮತದಾನ ನಡೆಯುತ್ತಿದೆ.  ಅಗರ್ತಲಾ ಮುನ್ಸಿಪಲ್ ಕಾರ್ಪೊರೇಷನ್ ಅತ್ಯಂತ ಕುತೂಹಲ ಕೆರಳಿಸಿದೆ.  ಅನ್ಯಾಯದ ಮಾರ್ಗಗಳ ಮೂಲಕ ಅಧಿಕಾರ ಕಿತ್ತುಕೊಳ್ಳಲು ಬಿಜೆಪಿ ಹವಣಿಸುತ್ತಿದೆ ಎಂದು ಪ್ರತಿಪಕ್ಷಗಳು ಆರೋಪಿಸಿವೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News