ಧಾರವಾಡ: ಎಸ್‌ಡಿಎಂ ವೈದ್ಯಕೀಯ ಕಾಲೇಜಿನ 66 ವಿದ್ಯಾರ್ಥಿಗಳಿಗೆ ಕೋವಿಡ್ ಪಾಸಿಟಿವ್

Update: 2021-11-25 09:07 GMT

ಧಾರವಾಡ, ನ.25: ಧಾರವಾಡದ ಸತ್ತೂರು ಬಡಾಣೆಯಲ್ಲಿರುವ ಎಸ್‌ಡಿಎಂ ವೈದ್ಯಕೀಯ ಕಾಲೇಜಿನ 66 ವಿದ್ಯಾರ್ಥಿಗಳು ಕೋವಿಡ್ ಗೆ ಪಾಸಿಟಿವ್ ಆಗಿರುವುದು ಬುಧವಾರ ದೃಢಪಟ್ಟಿದೆ. ಕೋವಿಡ್-19 ಸೋಂಕಿನ ತೀವ್ರಗೆ ಕಡಿಮೆಯಾಗುತ್ತಿದೆ ಎಂದು ಅಂದುಕೊಳ್ಳುತ್ತಿರುವ ನಡುವೆಯೇ ವೈದ್ಯಕೀಯ ಕಾಲೇಜು ವಿದ್ಯಾರ್ಥಿಗಳಲ್ಲೇ ಸೋಂಕು ಕಾಣಿಸಿಕೊಂಡಿರುವುದು ಆತಂಕಕ್ಕೆ ಕಾರಣವಾಗಿದೆ.

ಆರಂಭದಲ್ಲಿ ಎಸ್‌ಡಿಎಂ ವೈದ್ಯಕೀಯ ಕಾಲೇಜಿನ ಹಾಸ್ಟೆಲ್ ನಲ್ಲಿರುವ ನಾಲ್ವರು ವಿದ್ಯಾರ್ಥಿಗಳಲ್ಲಿ ಕೋವಿಡ್-19 ಸೋಂಕು ತಗಲಿರುವುದು ದೃಢಪಟ್ಟಿದೆ. ಈ ಹಿನ್ನೆಲೆಯಲ್ಲಿ ಹಾಸ್ಟೆಲ್ ನಲ್ಲಿರುವ 300 ವಿದ್ಯಾರ್ಥಿಗಳನ್ನು ತಪಾಸಣೆ ನಡೆಸಿದಾಗ 66 ವಿದ್ಯಾರ್ಥಿಗಳು ಕೋವಿಡ್ ಗೆ ಪಾಸಿಟಿವ್ ಆಗಿರುವುದು ದೃಢಪಟ್ಟಿದೆ. ಇನ್ನೂ 200 ವಿದ್ಯಾರ್ಥಿಗಳನ್ನು ತಪಾಸಣೆ ನಡೆಸಲು ನಿರ್ಧಾರಿಸಲಾಗಿದೆ. ಸದ್ಯ  ಸೋಂಕಿತ ವಿದ್ಯಾರ್ಥಿಗಳನ್ನು ಹಾಸ್ಟೆಲ್‌ನಲ್ಲೇ ಕ್ವಾರಂಟೈನ್ ಮಾಡಲಾಗಿದೆ ಎಂದು ಧಾರವಾಡ ಜಿಲ್ಲಾಧಿಕಾರಿ ನಿತೇಶ ಪಾಟೀಲ್ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News