×
Ad

ಚುನಾವಣೆಯನ್ನು ಗಂಭೀರವಾಗಿ ಪರಿಗಣಿಸಿ; ಪಕ್ಷದ ಅಭ್ಯರ್ಥಿಯನ್ನು ಗೆಲ್ಲಿಸಿ: ಧ್ರುವನಾರಾಯಣ್ ಕರೆ

Update: 2021-11-25 18:56 IST

ಉಡುಪಿ, ನ.25: ಡಿ.10ರಂದು ವಿಧಾನಪರಿಷತ್‌ಗೆ ನಡೆಯುವ ಚುನಾವಣೆಯನ್ನು ಪಕ್ಷದ ಕಾರ್ಯಕರ್ತ ಮತದಾರರು ಗಂಭೀರ ವಾಗಿ ಪರಿಗಣಿಸಿ, ಪಕ್ಷದ ಅಧಿಕೃತ ಅಭ್ಯರ್ಥಿಯಾದ ಮಂಜುನಾಥ ಭಂಡಾರಿ ಅವರನ್ನು ಗೆಲ್ಲಿಸುವಂತೆ ಕೆಪಿಸಿಸಿ ಕಾರ್ಯಾಧ್ಯಕ್ಷ ಹಾಗೂ ಮಾಜಿ ಸಂಸದ ಧ್ರುವನಾರಾಯಣ್ ಅವರು ಕಾಂಗ್ರೆಸ್‌ನ ಗ್ರಾಪಂ ಸದಸ್ಯ ಮತದಾರರಿಗೆ ಕರೆ ನೀಡಿದ್ದಾರೆ.

ಚುನಾವಣೆಗೆ ಪೂರ್ವಭಾವಿಯಾಗಿ ನಾಯರ್‌ಕೆರೆಯಲ್ಲಿರುವ ಕಾಂಗ್ರೆಸ್ ಭವನದಲ್ಲಿ ನಡೆದ ಸಭೆಯನ್ನುದ್ದೇಶಿಸಿ ಅವರು ಮಾತನಾ ಡಿದರು. ಕರಾವಳಿ ಒಂದು ಕಾಲದಲ್ಲಿ ಕಾಂಗ್ರೆಸ್‌ನ ಭದ್ರಕೋಟೆಯಾಗಿತ್ತು ಎಂಬುದನ್ನು ನಾವು ಮರೆಯಬಾರದು ಎಂದರು.

ಪಕ್ಷದಲ್ಲಿ ಸಾಮಾನ್ಯ ಕಾರ್ಯಕರ್ತರಾಗಿ ಪಕ್ಷ ಸಂಘಟನೆಯಲ್ಲಿ ತೊಡಗಿಸಿ ಕೊಂಡವರನ್ನು ಗುರುತಿಸಿ ಅಭ್ಯರ್ಥಿಯನ್ನಾಗಿ ಮಾಡ ಲಾಗಿದೆ. ಕೇವಲ ಕಾಂಗ್ರೆಸ್ ಮಾತ್ರ ಸಾಮಾಜಿಕ ನ್ಯಾಯಕ್ಕೆ ಒತ್ತು ನೀಡಿದೆ. ಬಿಜೆಪಿ ಚುನಾವಣೆಗೆ ನಿಲ್ಲಿಸಿದ ಅಭ್ಯರ್ಥಿಗಳ ಪಟ್ಟಿಯನ್ನು ನೋಡಿದರೆ ನಿಮಗೆ ಇದು ಮನದಟ್ಟಾಗುತ್ತದೆ. ನಾವು ದಲಿತರು, ಹಿಂದುಳಿದವರು, ಅಲ್ಪಸಂಖ್ಯಾತರು, ಮಹಿಳೆಯರು, ಯುವಕರು ಎಲ್ಲರಿಗೂ ಟಿಕೇಟ್ ನೀಡಿದ್ದೇವೆ ಎಂದು ಧ್ರುವನಾರಾಯಣ್ ನುಡಿದರು.

ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳನ್ನು ಒಳಗೊಂಡ ವಿಧಾನ ಪರಿಷತ್ ಸ್ಥಳೀಯ ಸಂಸ್ಥೆಗಳ ಒಂದು ಸ್ಥಾನಕ್ಕೆ ಅಭ್ಯರ್ಥಿಯಾಗಿ ಆಯ್ಕೆಯಾಗಿರುವ ಮಂಜುನಾಥ ಭಂಡಾರಿ ಮಾತನಾಡಿ, ಕಳೆದ ನಾಲ್ಕು ದಶಕಗಳಲ್ಲಿ ಪಕ್ಷದ ನಿಷ್ಠಾವಂತ ಕಾರ್ಯಕರ್ತನಾಗಿ ದುಡಿದ ಹಿನ್ನೆಲೆಯಲ್ಲಿ ನೀಡಿದ ಅವಕಾಶ ಇದಾಗಿದೆ ಎಂದು ಭಾವಿಸುವುದಾಗಿ ತಿಳಿಸಿದರು.

ಹಾಲಿ ವಿಧಾನ ಪರಿಷತ್ ಸದಸ್ಯರಾಗಿರುವ ಪ್ರತಾಪ್‌ ಚಂದ್ರ ಶೆಟ್ಟಿ, ಮಾಜಿ ಸಚಿವ ವಿನಯಕುಮಾರ್ ಸೊರಕೆ, ಕಾಂಗ್ರೆಸ್‌ನ ನಾಯಕರಾಗಿರುವ ಶ್ಯಾಮಲಾ ಭಂಡಾರಿ, ಎಂ.ಎ.ಗಫೂರ್, ದಿನೇಶ್ ಪುತ್ರನ್, ವೆರೋನಿಕಾ ಕರ್ನೇಲಿಯೊ, ಸರಳಾ ಕಾಂಚನ್ ಹಾಗೂ ಜಿಲ್ಲೆಯ ವಿವಿಧ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಅಶೋಕ್‌ ಕುಮಾರ್ ಕೊಡವೂರು ಪ್ರಾಸ್ತಾವಿಕವಾಗಿ ಮಾತನಾಡಿದರೆ, ಜಿಲ್ಲಾ ವಕ್ತಾರ ಬಿಪಿನ್‌ ಚಂದ್ರ ಪಾಲ್ ಅತಿಥಿಗಳನ್ನು ಸ್ವಾಗತಿಸಿದರು. ರೋಶನಿ ಒಲಿವೇರಾ ಹಾಗೂ ಡಾ.ಸುನೀತಾ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News