ಉಡುಪಿ: ನವೀಕರಣಗೊಂಡ ಸಭಾಭವನ ನ.29ರಂದು ಉದ್ಘಾಟನೆ
Update: 2021-11-25 19:02 IST
ಉಡುಪಿ, ನ.25: ಧಾರ್ಮಿಕ ದತ್ತಿ ಇಲಾಖೆಗೆ ಸೇರಿದ ಬನ್ನಂಜೆ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ನವೀಕರಣಗೊಂಡ ಶ್ರೀಮಹಾಲಿಂಗೇಶ್ವರ ಸಭಾಭವನದ ಉದ್ಘಾಟನಾ ಸಮಾರಂಭ ನ.29ರಂದು ಅಪರಾಹ್ನ 12:30ಕ್ಕೆ ದೇವಾಲಯದ ಆವರಣದಲ್ಲಿ ನಡೆಯಲಿದೆ.
ನವೀಕರಣಗೊಂಡ ಸಭಾಭವನವನ್ನು ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ. ಉದ್ಘಾಟಿಸಲಿದ್ದು, ಜಿಪಂ ಮುಖ್ಯ ಕಾರ್ಯ ನಿರ್ವಹಣಾಧಿ ಕಾರಿ ಡಾ.ನವೀನ್ ಭಟ್, ಎಸ್ಪಿ ಎನ್.ವಿಷ್ಣುವರ್ಧನ್, ದಾನಿಗಳಾದ ಪುರುಷೋತ್ತಮ ಶೆಟ್ಟಿ, ವಿನೀತ್ ಎಸ್ ಅಮೀನ್ ಮತ್ತಿತರರು ಭಾಗವಹಿಸಲಿದ್ದಾರೆ ಎಂದು ದೇವಸ್ಥಾನದ ಆಡಳಿತ ಅಧಿಕಾರಿ ಡಾ. ರೋಶನ್ ಕುಮಾರ್ ಶೆಟ್ಟಿ ತಿಳಿಸಿದ್ದಾರೆ.