×
Ad

ನ.28ರಂದು ಯಕ್ಷಗಾನ ಕಲಾರಂಗ ಪ್ರಶಸ್ತಿ ಪ್ರದಾನ

Update: 2021-11-25 20:14 IST

ಉಡುಪಿ, ನ.25: ಯಕ್ಷಗಾನ ಕಲಾರಂಗದ 2021ನೇ ಸಾಲಿನ ಪ್ರಶಸ್ತಿ ಪ್ರದಾನ ಸಮಾರಂಭ ನ.28ರ ರವಿವಾರ ಅಪರಾಹ್ನ 3 ಗಂಟೆಗೆ ಉಡುಪಿ ಶ್ರೀಕೃಷ್ಣ ಮಠದ ರಾಜಾಂಗಣದಲ್ಲಿ ನಡೆಯಲಿದೆ.

ಪರ್ಯಾಯ ಅದಮಾರು ಮಠದ ಶ್ರೀಈಶಪ್ರಿಯತೀರ್ಥ ಸ್ವಾಮೀಜಿ ಹಾಗೂ ಪೇಜಾವರ ಮಠಾಧೀಶ ಶ್ರೀವಿಶ್ವಪ್ರಸನ್ನತೀರ್ಥ ಸ್ವಾಮೀಜಿ ಅನುಗ್ರಹ ಸಂದೇಶ ನೀಡಲಿದ್ದಾರೆ. ರಾಜ್ಯ ಕನ್ನಡ ಮತ್ತು ಸಂಸ್ಕೃತಿ ಸಚಿವ ಸುನೀಲ್ ಕುಮಾರ್ ಪ್ರಶಸ್ತಿ ಪ್ರದಾನ ಮಾಡಲಿದ್ದು, ಉಡುಪಿ ಶಾಸಕ ಕೆ.ರಘುಪತಿ ಭಟ್ ಅಧ್ಯಕ್ಷತೆ ವಹಿಸಲಿದ್ದಾರೆ.

ಮೂಡಬಿದರೆಯ ಡಾ. ಎಂ.ಮೋಹನ ಆಳ್ವ ಹಾಗೂ ಚಂದ್ರಶೇಖರ ದಾಮ್ಲೆ ಅವರು ಮುಖ್ಯ ಅತಿಥಿಗಳಾಗಿ ಪಾಲುಗೊಳ್ಳಲಿರು ವರು. ಈ ಬಾರಿ 17 ಮಂದಿ ಹಿರಿಯ ಕಲಾವಿದರಿಗೆ ತಲಾ 20,000ರೂ. ಮೊತ್ತವನ್ನೊಳಗೊಂಡ ಪ್ರಶಸ್ತಿ, 50 ಸಾವಿರ ರೂ. ಮೊತ್ತದ ಶ್ರೀವಿಶ್ವೇಶ ತೀರ್ಥ ಪ್ರಶಸ್ತಿ ಆಳ್ವಾಸ್ ಕಾಲೇಜಿನ ಧೀಂಕಿಟ ಯಕ್ಷಗಾನ ಅಧ್ಯಯನ ಕೇಂದ್ರಕ್ಕೆ, ಯಕ್ಷಚೇತನ ಪ್ರಶಸ್ತಿ ಸಂಸ್ಥೆಯ ಹಿರಿಯ ಕಾರ್ಯಕರ್ತರಾದ ಕೋಶಾಧಿಕಾರಿ ಮನೋಹರ ಕೆ. ಇವರಿಗೆ ಪ್ರದಾನ ಮಾಡಲಾಗುವುದು.

ಸಮಾರಂಭದ ಪೂರ್ವದಲ್ಲಿ ಅಪರಾಹ್ನ 1:30ರಿಂದ ಆಳ್ವಾಸ್ ವಿದ್ಯಾರ್ಥಿ ಗಳಿಂದ ಸಾಯುಜ್ಯ ಸಂಗ್ರಾಮ ಯಕ್ಷಗಾನ ಪ್ರದರ್ಶನ ಗೊಳ್ಳಲಿದೆ ಎಂದು ಯಕ್ಷಗಾನ ಕಲಾರಂಗದ ಅಧ್ಯಕ್ಷ ಎಂ. ಗಂಗಾಧರರಾವ್ ಹಾಗೂ ಕಾರ್ಯದರ್ಶಿ ಮುರಲಿ ಕಡೆಕಾರ್ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News