×
Ad

ಬೆಂಗಳೂರು: ಖ್ಯಾತ ಗಾಯಕಿಯ ತಂದೆಯ ಮೃತದೇಹ ರೈಲ್ವೆ ಹಳಿಯಲ್ಲಿ ಪತ್ತೆ

Update: 2021-11-25 21:11 IST
ಸಾಂದರ್ಭಿಕ ಚಿತ್ರ

ಬೆಂಗಳೂರು, ನ.25: ತೆಲುಗು ಚಿತ್ರರಂಗದ ಖ್ಯಾತ ಗಾಯಕಿ ಹರಿಣಿ ಅವರ ತಂದೆಯ ಮೃತದೇಹ ರೈಲ್ವೇ ಹಳಿಯ ಬಳಿ ಪತ್ತೆಯಾಗಿದ್ದು, ಹಲವು ಅನುಮಾನಗಳಿಗೆ ಎಡೆಮಾಡಿದೆ.

ನಗರದ ಯಲಹಂಕ-ರಾಜಾನುಕುಂಟೆ ಪ್ರದೇಶದ ರೈಲ್ವೆ ಹಳಿ ಮಧ್ಯೆ ತೆಲಂಗಾಣ ಮೂಲದ ಎ.ಕೆ.ರಾವ್ ಅವರ ಮೃತದೇಹ ಪತ್ತೆಯಾಗಿದ್ದು, ಮರಣೋತ್ತರ ಪರೀಕ್ಷೆಗಾಗಿ ವಿಕ್ಟೋರಿಯಾ ಆಸ್ಪತ್ರೆಗೆ ರವಾನಿಸಲಾಗಿದೆ ಎಂದು ತಿಳಿದುಬಂದಿದೆ. 

ಇತ್ತೀಚಿಗೆ ಎ.ಕೆ. ರಾವ್ ಹಲವು ದಿನಗಳಿಂದ ಕಣ್ಮರೆಯಾಗಿದ್ದರು. ಈ ಸಂಬಂಧ ಸ್ಥಳೀಯ ಪೊಲೀಸ್ ಠಾಣೆಯಲ್ಲಿ ಕುಟುಂಬಸ್ಥರು ದೂರು ನೀಡಿದ್ದರು. ಮತ್ತೊಂದೆಡೆ ರಾವ್ ವಿರುದ್ಧ ಸುದ್ದುಗುಂಟೆಪಾಳ್ಯ ಪೊಲೀಸ್ ಠಾಣೆಯಲ್ಲಿ ವಂಚನೆ ಪ್ರಕರಣ ದಾಖಲಾಗಿತ್ತು ಎನ್ನಲಾಗಿದೆ.

ನ.22ರಂದು ರಾತ್ರಿ ಯಲಹಂಕ-ರಾಜಾನುಕುಂಟೆ ರೈಲ್ವೆ ಹಳಿ ಮಧ್ಯೆ ಚಾಕುವಿನಿಂದ ಚುಚ್ಚಿಕೊಂಡು ಸಾವನ್ನಪ್ಪಿರುವ ಸ್ಥಿತಿಯಲ್ಲಿ ಮೃತದೇಹ ಪತ್ತೆ ಹಿನ್ನೆಲೆಯಲ್ಲಿ ಸ್ಥಳಕ್ಕೆ ತೆರಳಿದ್ದ ಬೆಂಗಳೂರು ನಗರ ರೈಲ್ವೆ ಪೊಲೀಸರು ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಘಟನೆ ಸಂಬಂಧ ಮರಣೋತ್ತರ ಪರೀಕ್ಷೆ ನಡೆಸಿರುವ ವೈದ್ಯರು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಪೊಲೀಸರು ತಿಳಿಸಿದ್ದಾರೆ. ವಿಷಯ ತಿಳಿಯುತ್ತಿದ್ದಂತೆ ರಾವ್ ಕುಟುಂಬಸ್ಥರು ಪರಿಶೀಲಿಸಿ ರಾವ್ ಅವರ ಸಾವು ಸಹಜ ಸಾವಲ್ಲ. ಇದೊಂದು ಕೊಲೆ ಎಂದು ಬೆಂಗಳೂರು ನಗರ ರೈಲ್ವೆ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ದೂರಿನ ಮೇರೆಗೆ ಕೊಲೆ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಕೈಗೊಂಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News