×
Ad

ಅರಿವು ಯೋಜನೆಯಡಿ ಸಾಲ ಸೌಲಭ್ಯಕ್ಕೆ ಅರ್ಜಿ ಆಹ್ವಾನ

Update: 2021-11-25 21:26 IST

ಮಂಗಳೂರು, ನ. 25: ಅರಿವು ವಿದ್ಯಾಭ್ಯಾಸ ಸಾಲ ಯೋಜನೆಯಡಿ ಪ್ರಸಕ್ತ ಸಾಲಿನಲ್ಲಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ (ಸಿಇಟಿ-ನೀಟ್) ಎಂಬಿಬಿಎಸ್, ಬಿಡಿಎಸ್, ಬಿಇ, ಬಿ-ಟೆಕ್, ಬ್ಯಾಚುರಲ್ ಆಫ್ ಆರ್ಕಿಟೆಕ್ಚರ್, ಆಯುಷ್ ಕೋರ್ಸ್‌ಗಳಿಗೆ ಆಯ್ಕೆಯಾದವರಿಗೆ ನವೀಕರಣ ಸಾಲ ನೀಡಲು ಅಲ್ಪಸಂಖ್ಯಾತ (ಬೌದ್ಧ, ಕ್ರಿಶ್ಚಿಯನ್, ಜೈನ್ಸ್, ಮುಸ್ಲಿಂ, ಪಾರ್ಸಿ, ಸಿಖ್) ವಿದ್ಯಾರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ವಿದ್ಯಾರ್ಥಿಗಳು ಕಳೆದ ವರ್ಷ ಪಡೆದಿರುವ ಸಾಲದ ಶೇ.12ರಷ್ಟು ಜಿಲ್ಲಾ ಕಚೇರಿಯಲ್ಲಿ ಪಾವತಿಸಿ ನಂತರ ನಿಗಮದ ವೆಬ್‌ಸೈಟ್ kmdconline.karnataka.gov.in ಮೂಲಕ ಅರ್ಜಿ ಸಲ್ಲಿಸಬಹುದು.ಅರ್ಜಿ ಸಲ್ಲಿಸಲು ಡಿಸೆಂಬರ್ 20 ಕೊನೆಯ ದಿನವಾಗಿದೆ.

ಹೆಚ್ಚಿನ ಮಾಹಿತಿಗೆ ಜಿಲ್ಲಾ ವ್ಯವಸ್ಥಾಪಕರ ಕಚೇರಿ, ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ, ಮೌಲಾನಾ ಆಝಾದ್ ಅಲ್ಪಸಂಖ್ಯಾತರ ಭವನ, ಪಾಂಡೇಶ್ವರ, ಮಂಗಳೂರು ಅಥವಾ ಮೊ.ಸಂ:8277799990 ನ್ನು ಸಂಪರ್ಕಿಸುವಂತೆ ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರ ಪ್ರಕಟನೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News