ಮಂಗಳೂರು; ಮಹಿಳಾ ಸಿಬ್ಬಂದಿಗೆ ಕಿರುಕುಳ ಆರೋಪ: ಆರೋಗ್ಯಾಧಿಕಾರಿ ಡಾ.ರತ್ನಾಕರ್ ಅಮಾನತು

Update: 2021-11-26 07:02 GMT
ಡಾ.ರತ್ನಾಕರ್

ಮಂಗಳೂರು: ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಅಡಿಯಲ್ಲಿ ಕಾರ್ಯ ನಿರ್ವಹಿಸುತಿದ್ದ ಜಿಲ್ಲಾ ಕಾರ್ಯಕ್ರಮಾಧಿಕಾರಿಯೋರ್ವ ಕಚೇರಿಯ ಮಹಿಳಾ ಸಿಬ್ಬಂದಿಗೆ ಕಿರುಕುಳ ನೀಡಿರುವ ಆರೋಪ ವ್ಯಕ್ತವಾಗಿದ್ದು, ಅವರನ್ನು‌ ಕರ್ತವ್ಯದಿಂದ ಅಮಾನತು ಮಾಡಲಾಗಿದೆ ಎಂದು ವರದಿಯಾಗಿದೆ.

ಆಯುಷ್ಮಾನ್ ನೋಡೆಲ್ ಅಧಿಕಾರಿ, ಕುಷ್ಠರೋಗ ವಿಭಾಗದ ಆರೋಗ್ಯಾಧಿಕಾರಿಯೂ ಆಗಿದ್ದ ಡಾ. ರತ್ನಾಕರ್ ವಿರುದ್ಧ ಕಳೆದ ಕೆಲ ತಿಂಗಳ ಹಿಂದೆ ದ.ಕ. ಜಿಲ್ಲಾಧಿಕಾರಿಗೂ ದೂರು ಸಲ್ಲಿಕೆಯಾಗಿತ್ತು. ಈ ಬಗ್ಗೆ ಆರೋಗ್ಯ ಇಲಾಖೆ ಹಾಗೂ ಜಿಲ್ಲಾ ಮಟ್ಟದ ದೂರು ಸಮಿತಿಯಲ್ಲೂ ತನಿಖೆ ನಡೆದು ವರದಿ ಸರಕಾರಕ್ಕೆ ಸಲ್ಲಿಸಲಾಗಿತ್ತು.

ಕಚೇರಿಯಲ್ಲಿ ಮಹಿಳಾ ಸಿಬ್ಬಂದಿಗೆ ಕಿರುಕುಳ ನೀಡುವ, ಅಸಭ್ಯವಾಗಿ ವರ್ತಿಸುತ್ತಿರುವುದಾಗಿ ದೂರಲಾಗಿತ್ತು. ಮೂಲತಹ ಉಡುಪಿ ಜಿಲ್ಲೆ ಕುಂದಾಪುರದ ರತ್ನಾಕರ್, ಮಂಗಳೂರಿನ ದೇರಳಕಟ್ಟೆಯಲ್ಲಿ ವಾಸವಾಗಿದ್ದರೆನ್ನಲಾಗಿದೆ.

''ಮಹಿಳಾ ಸಿಬ್ಬಂದಿ ಜತೆ ಅನುಚಿತ ವರ್ತನೆ ಕುರಿತಂತೆ ವೈದ್ಯಾಧಿಕಾರಿಯಾಗಿದ್ದ ಡಾ. ರತ್ನಾಕರ್ ವಿರುದ್ಧ ಕೆಲ ತಿಂಗಳ ಹಿಂದೆ ದೂರು ಬಂದಿದ್ದು ಈ ಬಗ್ಗೆ ಆರೋಗ್ಯ ಇಲಾಖೆಯ ಆಂತರಿಕ ಸಮಿತಿ ಹಾಗೂ ಜಿಲ್ಲಾ ಮಟ್ಟದ ದೂರು ಸಮಿತಿಯಿಂದಲೂ ತನಿಖೆ ನಡೆಸಲಾಗಿತ್ತು. ಪ್ರಾಥಮಿಕ ಹಂತದ ತನಿಖೆಯ ವೇಳೆ ತಪ್ಪೆಸಗಿರುವುದು ಸಾಬೀತಾಗಿರುವುದರಿಂದ ಈ ಬಗ್ಗೆ ಸರಕಾರಕ್ಕೆ ವರದಿಯನ್ನು ಸಲ್ಲಿಸಲಾಗಿತ್ತು. ಆ ಪ್ರಕಾರ ಅವರನ್ನು ನ.8ರಿಂದ ಕರ್ತವ್ಯದಿಂದ ಅಮಾನತಿನಲ್ಲಿರಿಸಲು  ಆದೇಶವಾಗಿರುತ್ತದೆ''.

- ಡಾ. ರಾಜೇಂದ್ರ ಕೆ.ವಿ., ಜಿಲ್ಲಾಧಿಕಾರಿ, ದ.ಕ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News