ರಾಜ್ಯದಲ್ಲಿ ಇನ್ನೆರಡು ದಿನ ಮಳೆ ಸಾಧ್ಯತೆ: ಹವಾಮಾನ ಇಲಾಖೆ

Update: 2021-11-26 13:05 GMT
ಫೈಲ್ ಚಿತ್ರ

ಬೆಂಗಳೂರು, ನ.26: ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತದ ಕಾರಣದಿಂದ ರಾಜ್ಯದ ಹಲವು ಜಿಲ್ಲೆಗಳಲ್ಲಿ ನ.27 ಮತ್ತು 28ರಂದು ವ್ಯಾಪಕ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಕಳೆದ ಹಲವು ದಿನಗಳಿಂದ ರಾಜ್ಯದ ವಿವಿಧೆಡೆ ಮಳೆಯಾಗುತ್ತಿದೆ. ಮುಂದಿನ ಎರಡು ದಿನಗಳ ಕಾಲ ಬೆಂಗಳೂರು, ಬೆಂ.ಗ್ರಾಮಾಂತರ, ರಾಮನಗರ, ಕೋಲಾರ, ಚಿಕ್ಕಬಳ್ಳಾಪುರ, ಮೈಸೂರು, ಚಾಮರಾಜನಗರ ಮತ್ತು ತುಮಕೂರಿನಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.  

ಕಳೆದರೆಡು ದಿನಗಳಿಂದ ಕೊಂಚ ಬಿಡುವು ಕೊಟ್ಟಿದ್ದ ಮಳೆ ಮತ್ತೆ ಪ್ರಾರಂಭವಾಗಲಿದೆ. ಉತ್ತರ ಕರ್ನಾಟಕ ಭಾಗದಲ್ಲಿ ಚಳಿ ಮತ್ತು ಸುಳಿ ಗಾಳಿಯ ಜತೆ ಒಣ ಹವೆ ಇರಲಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News