ಮನೆ ಕಳ್ಳತನ: ಓರ್ವನ ಬಂಧನ; 28 ಲಕ್ಷ ಮೌಲ್ಯದ ಚಿನ್ನಾಭರಣ ವಶ

Update: 2021-11-26 12:42 GMT

ಬೆಂಗಳೂರು, ನ.26: ಬೀಗ ಹಾಕಿರುವ ಮನೆಗಳನ್ನು ಗುರುತಿಸಿ ಹಣ, ಆಭರಣ ಕಳ್ಳತನ ಮಾಡುತ್ತಿದ್ದ ಆರೋಪಿಯೊಬ್ಬನನ್ನು ಬಂಧಿಸಿ, 28 ಲಕ್ಷ ರೂ.ಮೌಲ್ಯದ ಚಿನ್ನಾಭರಣವನ್ನು ವಶಪಡಿಸಿಕೊಳ್ಳುವಲ್ಲಿ ಬ್ಯಾಡರಹಳ್ಳಿ ಠಾಣೆ ಪೊಲೀಸರು ಯಶಸ್ವಿಯಾಗಿದ್ದಾರೆ.    

ಆರೋಪಿಯಿಂದ 8 ಪ್ರಕರಣಗಳಿಗೆ ಸಂಬಂಧಿಸಿದಂತೆ 534 ಗ್ರಾಂ ತೂಕದ ಚಿನ್ನಾಭರಣಗಳು, 2 ಕೆಜಿ 950 ಗ್ರಾಂ ಬೆಳ್ಳಿಯ ಸಾಮಾನುಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. 

ಸೆ.4ರ ರಾತ್ರಿ ಮನೆ ಮಾಲಕರು ಮನೆಗೆ ಬೀಗ ಹಾಕಿಕೊಂಡು ಕುಟುಂಬ ಸಮೇತ ಸ್ವಂತ ಊರಿಗೆ ಹೋಗಿದ್ದರು. ಈ ಸಂದರ್ಭದಲ್ಲಿ ಕಳ್ಳರು ಇವರ ಮನೆಯ ಬೀಗ ಮುರಿದು ಒಳಗೆ ನುಗ್ಗಿ ಹಣ ಹಾಗೂ ಚಿನ್ನದ ಆಭರಣಗಳನ್ನು ಕಳವು ಮಾಡಿಕೊಂಡು ಪರಾರಿಯಾಗಿದ್ದರು. 

ಮನೆ ಮಾಲಕರು ಊರಿನಿಂದ ವಾಪಸ್ಸಾದಾಗ ಬೀಗ ಮುರಿದಿರುವುದು ಗಮನಿಸಿ ಒಳಗೆ ಹೋಗಿ ನೋಡಿದಾಗ ಕಳ್ಳತನ ನಡೆದಿರುವುದು ಗೊತ್ತಾಗಿದೆ. ತಕ್ಷಣ ಬ್ಯಾಡರಹಳ್ಳಿ ಪೊಲೀಸರಿಗೆ ದೂರು ನೀಡಿದ್ದು, ಪೊಲೀಸರು ತನಿಖೆ ಕೈಗೊಂಡು ಆರೋಪಿಯನ್ನು ಬಂಧಿಸಿದ್ದಾರೆ. ಆರೋಪಿಯನ್ನು ಹೆಚ್ಚಿನ ತನಿಖೆಗೆ ಒಳಪಡಿಸಿದ್ದಾರೆ.  

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News