ವಾದಿರಾಜ-ಕನಕದಾಸ ಸಂಗೀತೋತ್ಸವ
Update: 2021-11-26 19:59 IST
ಉಡುಪಿ, ನ.26: ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಬೆಂಗಳೂರು, ವಾದಿರಾಜ ಕನಕರಾಜ ಸಂಗೀತೋತ್ಸವ ಸಮಿತಿ, ಕನಕದಾಸ ಅಧ್ಯಯನ ಸಂಶೋಧನ ಪೀಠ, ಮಣಿಪಾಲ ಅಕಾಡೆಮಿ ಆಫ್ ಹೈಯರ್ ಎಜ್ಯುಕೇಶನ್, ಮಹಾತ್ಮಾಗಾಂಧಿ ಮೆಮೋರಿಯಲ್ ಕಾಲೇಜು ಉಡುಪಿ ಹಾಗೂ ಸರಿಗಮ ಭಾರತಿ ಸಂಗೀತ ವಿದ್ಯಾಲಯ ಪರ್ಕಳ ಇವರ ಸಂಯುಕ್ತ ಆಶ್ರಯದಲ್ಲಿ 43ನೇ ವಾದಿರಾಜ -ಕನಕದಾಸ ಸಂಗೀತೋತ್ಸವ ಕಾರ್ಯಕ್ರಮ ಡಿಸೆಂಬರ್ 3 ಮತ್ತು 4 ರಂದು ನಗರದ ಎಂ.ಜಿ.ಎಂ ಕಾಲೇಜು ಆವರಣದ ನೂತನ ರವೀಂದ್ರ ಮಂಟಪದಲ್ಲಿ ನಡೆಯಲಿದೆ.
ಡಿ.3ರಂದು ಸಂಜೆ 4 ಕ್ಕೆ ಮಾಹೆ ಕುಲಸಚಿವ ಡಾ. ನಾರಾಯಣ ಸಭಾಹಿತ್ ಉದ್ಘಾಟಿಸಲಿದ್ದು, ಎಂ.ಜಿ.ಎಂ ಕಾಲೇಜು ಪ್ರಾಂಶುಪಾಲ ಡಾ. ದೇವಿದಾಸ್ ಎಸ್.ನಾಯ್ಕಾ ಅಧ್ಯಕ್ಷತೆ ವಹಿಸಲಿದ್ದಾರೆ.