ಕೋಡಿ ಬ್ಯಾರೀಸ್‌ ಶಿಕ್ಷಣ ಸಂಸ್ಥೆ ವತಿಯಿಂದ ಸಂವಿಧಾನ ದಿನಾಚರಣೆ

Update: 2021-11-26 14:41 GMT

ಕುಂದಾಪುರ, ನ.26: ಕೋಡಿ ಬ್ಯಾರೀಸ್ ಸಮೂಹ ಶಿಕ್ಷಣ ಸಂಸ್ಥೆಗಳ ವತಿಯಿಂದ ಶುಕ್ರವಾರ ಸಂವಿಧಾನ ದಿನವನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು.

ಸಂವಿಧಾನದ ಪೂರ್ವ ಪೀಠಿಕೆಯಲ್ಲಿ, ಅಡಕವಾಗಿರುವ ಸಾರ್ವಭೌಮ ಸಮಾಜವಾದಿ, ಪ್ರಜಾಸತ್ತಾತ್ಮಕ ಪದಗಳನ್ನು ಅತ್ಯಂತ ಸೋದಾಹರಣವಾಗಿ ವಿವರಿಸುವುದರ ಮೂಲಕ ಸರ್ವ ಶೃದ್ಧಾ ಪೂರ್ವಕವಾಗಿ ಸಂವಿಧಾನದ ಆಶೋತ್ತರಗಳಿಗೆ ಬದ್ಧರಾಗಿರುವುದಕ್ಕೆ ಸಂಕಲ್ಪತೊಟ್ಟವರಾಗಿ ಪ್ರತಿಜ್ಞಾವಿಧಿಯನ್ನು ಸ್ವೀಕರಿಸಲಾಯಿತು. ಹಿರಿಯ ಶಿಕ್ಷಕಿ ಜಯಶೀಲ ಶೆಟ್ಟಿ ಸಂವಿಧಾನದ ಪೂರ್ವ ಪೀಠಿಕೆಯನ್ನು ವಿವರಿಸುವುದರೊಂದಿಗೆ ಪ್ರತಿಜ್ಞಾ ವಿಧಿ ಯನ್ನು ಬೋಧಿಸಿದರು.

ಸಮಾರಂಭದಲ್ಲಿ ಬ್ಯಾರೀಸ್ ಸಮೂಹ ಶಿಕ್ಷಣ ಸಂಸ್ಥಗಳ ಅಧ್ಯಕ್ಷ ಹಾಜಿ ಅಬ್ದುಲ್ ರಹ್ಮಾನ್, ಆಡಳಿತ ನಿರ್ದೇಶಕ ದೋಮ ಚಂದ್ರಶೇಖರ್ ಮತ್ತು ಎಲ್ಲಾ ಅಂಗ ಸಂಸ್ಥೆಗಳ ಮುಖ್ಯಸ್ಥರು, ಶಿಕ್ಷಕ ವೃಂದ, ಶಿಕ್ಷಕೆತರ ವೃಂದ, ಸಂಸ್ಥೆಗಳ ಎಲ್ಲಾ ವಿಧ್ಯಾರ್ಥಿಗಳು ಪಾಲ್ಗೊಂಡಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News