ಆರ್ ಜೆಡಿ ವರಿಷ್ಠ ಲಾಲು ಪ್ರಸಾದ್ ಯಾದವ್ ಏಮ್ಸ್ ಗೆ ದಾಖಲು

Update: 2021-11-26 15:02 GMT

ಹೊಸದಿಲ್ಲಿ: ರಾಷ್ಟ್ರೀಯ ಜನತಾ ದಳದ ವರಿಷ್ಠ ಲಾಲು ಪ್ರಸಾದ್ ಯಾದವ್ ಅವರನ್ನು ಶುಕ್ರವಾರ ದಿಲ್ಲಿಯ ಏಮ್ಸ್ ತುರ್ತು ವಿಭಾಗಕ್ಕೆ ದಾಖಲಿಸಲಾಗಿದೆ.

ಮೇವು ಹಗರಣಕ್ಕೆ ಸಂಬಂಧಿಸಿದ ದುಮ್ಕಾ ಖಜಾನೆ ಪ್ರಕರಣದ ಆರೋಪಿಯಾಗಿರುವ ಹಿರಿಯ ರಾಜಕಾರಣಿ ಲಾಲು ಪ್ರಸಾದ್ ಜ್ವರ ಹಾಗೂ ದಣಿವಿನಿಂದ ಬಳಲುತ್ತಿದ್ದಾರೆ ಎಂದು ವರದಿಯಾಗಿದೆ. ಅವರ ಸ್ಥಿತಿ ಗಂಭೀರವಾಗಿಲ್ಲದಿದ್ದರೂ ರಕ್ತದ ವರದಿಗಾಗಿ ಕಾಯಲಾಗುತ್ತಿದೆ.

ಲಾಲು ಅವರು ಪ್ರಸ್ತುತ ಜಾಮೀನಿನ ಮೇಲೆ ಹೊರಗಿದ್ದಾರೆ ಮತ್ತು ವಾಡಿಕೆಯ ಆರೋಗ್ಯ ತಪಾಸಣೆಗಾಗಿ ಈ ವರ್ಷದ ಆರಂಭದಲ್ಲಿ  ಆಲ್ ಇಂಡಿಯಾ ಇನ್‌ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸ್‌ಗೆ (ಏಮ್ಸ್)ಭೇಟಿ ನೀಡಿದ್ದರು.

73 ವರ್ಷ ವಯಸ್ಸಿನ ಆರ್‌ಜೆಡಿ ಮುಖ್ಯಸ್ಥ ಮತ್ತು ಬಿಹಾರದ ಮಾಜಿ ಮುಖ್ಯಮಂತ್ರಿಯ ವೀಡಿಯೊ ಈ ವಾರದ ಆರಂಭದಲ್ಲಿ ವೈರಲ್ ಆಗಿತ್ತು, ವೀಡಿಯೊದಲ್ಲಿ ಅವರು ಜೀಪಿನಲ್ಲಿ ಪಕ್ಷದ ಕಚೇರಿಗೆ ಹೋಗುತ್ತಿರುವುದನ್ನು ಕಾಣಬಹುದು. 90ರ ದಶಕದ ಮೇವು ಹಗರಣಕ್ಕೆ ಸಂಬಂಧಿಸಿದ ಮತ್ತೊಂದು ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ನ್ಯಾಯಾಲಯಕ್ಕೆ ಹಾಜರಾಗಲು ಅವರು ಪಾಟ್ನಾಕ್ಕೆ ತೆರಳಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News