×
Ad

ಡಿ.8ರವರೆಗೆ ಕೋವಿಡ್ ಮಾರ್ಗಸೂಚಿ ವಿಸ್ತರಣೆ

Update: 2021-11-26 22:24 IST

ಮಂಗಳೂರು, ನ.26: ಪ್ರಸ್ತುತ ಕೋವಿಡ್-19 ವೈರಾಣು ಸೋಂಕು ನಿಯಂತ್ರಣದಲ್ಲಿದ್ದು, ಈವರೆಗೆ ಸಾಧಿಸಿದ ಪ್ರಗತಿಯನ್ನು ಉಳಿಸಿಕೊಳ್ಳಲು ಮತ್ತು ರಾಜ್ಯದಲ್ಲಿನ ಪ್ರಕರಣಗಳ ಹೊರೆಯನ್ನು ಕಡಿಮೆ ಮಾಡಲು ಡಿ.8ರವರೆಗೆ ಕೋವಿಡ್ ಮಾರ್ಗಸೂಚಿ ಯನ್ನು ವಿಸ್ತರಣೆ ಮಾಡಲಾಗಿದೆ ಎಂದು ದ.ಕ.ಜಿಲ್ಲಾಧಿಕಾರಿ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

ಪರೀಕ್ಷೆ-ಪತ್ತೆ-ಚಿಕಿತ್ಸೆ ಲಸಿಕಾಕರಣ ಮತ್ತು ಕೋವಿಡ್-19 ಸಮುಚಿತ ವರ್ತನೆಗಳನ್ನು ಕಟ್ಟುನಿಟ್ಟಾಗಿ ಅನುಸರಿಸುವ ಸಲುವಾಗಿ ಸರಕಾರವು ಕೋವಿಡ್-19 ಕಣ್ಣಾವಲು, ನಿಯಂತ್ರಣ ಮತ್ತು ಜಾಗೃತಿಗೆ ಸಂಬಂಧಿಸಿದ ಮಾರ್ಗಸೂಚಿಗಳನ್ನು ಡಿ.8ರ ಬೆಳಗ್ಗೆ 6 ರವರೆಗೆ ಮುಂದುವರೆಸಿ ಆದೇಶ ಹೊರಡಿಸಲಾಗಿದೆ.

ಕೇರಳದಿಂದ ದ.ಕ. ಜಿಲ್ಲೆಗೆ ಪ್ರವೇಶವಿರುವ ಗಡಿಭಾಗಗಳಲ್ಲಿ ಈಗಾಗಲೇ ನಿರ್ಮಿಸಲಾಗಿರುವ ಚೆಕ್‌ಪೋಸ್ಟ್‌ಗಳಲ್ಲಿ ತಪಾಸಣೆ ಕಾರ್ಯವನ್ನು ಮುಂದುವರಿಸುವಂತೆ ಜಿಲ್ಲಾ ಎಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷರೂ ಆಗಿರುವ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಆದೇಶ ಹೊರಡಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News