ಕಾಸರಗೋಡು: 128 ಕೆಜಿ ಗಾಂಜಾ ಸಹಿತ ಓರ್ವನ ಬಂಧನ

Update: 2021-11-27 05:08 GMT

ಕಾಸರಗೋಡು, ನ.27: ಕಾರಿನಲ್ಲಿ ಗಾಂಜಾ ಸಾಗಾಟ ಮಾಡುತ್ತಿದ್ದ ಆರೋಪದಲ್ಲಿ ಓರ್ವನನ್ನು ಬಂಧಿಸಿದ ಆದೂರು ಪೊಲೀಸರು 128 ಕೆಜಿ ಗಾಂಜಾ ಹಾಗೂ ಸಾಗಾಟಕ್ಕೆ ಬಳಸಿದ ಕಾರನ್ನು ವಶಪಡಿಸಿಕೊಂಡಿದ್ದಾರೆ.

ಕಾಸರಗೋಡು ವಿದ್ಯಾನಗರ ನಿವಾಸಿ ಝುಬೈರ್ ಬಂಧಿತ ಆರೋಪಿ. ಈತನನ್ನು ಆದೂರು ಪೊಲೀಸರು ಮತ್ತು ಅಬಕಾರಿ ದಳದ ಸಿಬ್ಬಂದಿ ಜಂಟಿ ಕಾರ್ಯಾಚರಣೆ ಮೂಲಕ ಬಂಧಿಸಿದ್ದಾರೆ.

ಆರೋಪಿಯು ಗಾಂಜಾವನ್ನು ಆಂಧ್ರ ಪ್ರದೇಶದಿಂದ ಕಾರಿನಲ್ಲಿ ಸಾಗಾಟ ಮಾಡುತ್ತಿದ್ದ ಬಗ್ಗೆ ದೊರೆತ ಖಚಿತ ಮಾಹಿತಿಯನ್ನು ಆಧರಿಸಿ ಈ ಕಾರ್ಯಾಚರಣೆ ನಡೆಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News