ಶಾಲೆ-ಹಾಸ್ಟೆಲ್ ಗಳಲ್ಲಿ ಕೋವಿಡ್ ಉಲ್ಬಣ: ಮುಂಜಾಗ್ರತಾ ಕ್ರಮಗಳ ಬಗ್ಗೆ ಚರ್ಚಿಸಲು ಇಂದು ಸಂಜೆ ಸಭೆ: ಸಿಎಂ

Update: 2021-11-27 08:38 GMT

ಬೆಂಗಳೂರು, ನ.27: ಧಾರವಾಡ, ಬೆಂಗಳೂರು ಗ್ರಾಮಾಂತರ ಪ್ರದೇಶಗಳ ಶಾಲೆ ಹಾಗೂ ಹಾಸ್ಟೆಲ್ ಗಳಲ್ಲಿ ಮತ್ತು ಕೇರಳದಲ್ಲಿ ಕೋವಿಡ್ ಪಾಸಿಟಿವ್ ಪ್ರಕರಣಗಳು  ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವ ಬಗ್ಗೆ ಚರ್ಚಿಸಲು ಇಂದು (ನ.27) ಸಂಜೆ ಸಭೆ ನಡೆಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

ಇಂದು ತಮ್ಮ ಆರ್.ಟಿ.ನಗರದ ನಿವಾಸದಲ್ಲಿ ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡಿದ ಮುಖ್ಯಮಂತ್ರಿ, ಇಂದು ಸಂಜೆ 4 ಗಂಟೆಗೆ ಸಭೆ ನಡೆಸಲಾಗುವುದು. ಸಭೆಯಲ್ಲಿ ಆರೋಗ್ಯ, ಕೋವಿಡ್ ತಜ್ಞರು ಭಾಗವಹಿಸುವರು. ಕೋವಿಡ್ ಹೊಸ ತಳಿಯ ಬಗ್ಗೆಯೂ ಸಭೆಯಲ್ಲಿ ಚರ್ಚಿಸಲಾಗುವುದು. ಇದಕ್ಕೆ ಸಂಬಂಧಿಸಿ ಕೈಗೊಳ್ಳಬಹುದಾದ ಮುಂಜಾಗ್ರತಾ ಕ್ರಮಗಳ ಬಗ್ಗೆ ಚರ್ಚಿಸಲಾಗುವುದು. ಸಭೆಯಲ್ಲಿ ಚರ್ಚಿಸಿದ ಬಳಿಕ ಮುಂಜಾಗ್ರತಾ ಕ್ರಮಗಳ ಬಗ್ಗೆ ತಿಳಿಸಲಾಗುವುದು ಎಂದು ಹೇಳಿದರು.

ಬಾಕಿ ಇರುವ ಕಡತಗಳ ಶೀಘ್ರ ವಿಲೇವಾರಿಗೆ ಕ್ರಮ:
ಸರ್ಕಾರದಲ್ಲಿ 2 ವರ್ಷದಿಂದ ಕಡತಗಳು ವಿಲೇವಾರಿಯಾಗದೇ ಬಾಕಿ ಇರುವ ಬಗ್ಗೆ ಉತ್ತರಿಸುತ್ತಾ, ಕೆಲವು ಇಲಾಖೆಗಳಲ್ಲಿ ತಾಂತ್ರಿಕ ಮತ್ತು ಕಾನೂನಾತ್ಮಕ ಕಾರಣಗಳಿಂದ ಕಡತಗಳು ನಿರ್ಣಯವಾಗದೇ ಉಳಿದಿದೆ. ಇದಕ್ಕಿರುವ ಕಾನೂನು ಹಾಗೂ ತಾಂತ್ರಿಕ ತೊಡಕುಗಳನ್ನು ನಿವಾರಿಸಲು ಕ್ರಮ ಕೈಗೊಳ್ಳುವಂತೆ  ಮುಖ್ಯ ಕಾರ್ಯದರ್ಶಿಗಳಿಗೆ ತಿಳಿಸಲಾಗಿದೆ. ಈ ಬಗ್ಗೆ ಕಾನೂನು ಸಚಿವರ ಅಭಿಪ್ರಾಯವನ್ನೂ ಪಡೆದು ಕೂಡಲೇ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News