ಮಾಣಿ; ಕಾರು ಢಿಕ್ಕಿ: ಬಾಲಕನಿಗೆ ಗಾಯ

Update: 2021-11-27 12:08 GMT

ಬಂಟ್ವಾಳ, ನ.27: ಶಾಲೆ ಬಿಟ್ಟು ಮನೆಗೆ ತೆರಳುತ್ತಿದ್ದ ವಿದ್ಯಾರ್ಥಿಗೆ ಕಾರು ಢಿಕ್ಕಿ ಹೊಡೆದ ಪರಿಣಾಮ ಬಾಲಕ ಗಂಭೀರ ಗಾಯಗೊಂಡ ಘಟನೆ ಮಾಣಿಯಲ್ಲಿ ಶನಿವಾರ ನಡೆದಿದೆ.

ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಮಾಣಿಯಲ್ಲಿ ರಸ್ತೆ ದಾಟುತ್ತಿದ್ದಾಗ ಈ ಘಟನೆ ಸಂಭವಿಸಿದೆ.

ಮಾಣಿ ಕರ್ನಾಟಕ ಪ್ರೌಢ ಶಾಲೆಯ 10ನೇ ತರಗತಿ ವಿದ್ಯಾರ್ಥಿ, ಕೊಡಾಜೆ ನಿವಾಸಿ  ಭರತ್ ಗಾಯಗೊಂಡ ಬಾಲಕ ಎಂದು ತಿಳಿದು ಬಂದಿದೆ. ಈತ ಶಾಲೆ ಬಿಟ್ಟು ಮನೆಗೆ ತೆರಳುತ್ತಿದ್ದಾಗ ಮಾಣಿಯಿಂದ ಉಪ್ಪಿನಂಗಡಿ ಕಡೆಗೆ ಹೋಗುತ್ತಿದ್ದ ಕಾರು ಢಿಕ್ಕಿ ಹೊಡೆದಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News