ಅಂಪಾರು ನಿತ್ಯಾನಂದ ಶೆಟ್ಟಿಗೆ ಪಿಎಚ್.ಡಿ ಪದವಿ

Update: 2021-11-27 14:14 GMT

ಉಡುಪಿ, ನ.27: ಕಲ್ಯಾಣಪುರದ ಮಿಲಾಗ್ರಿಸ್ ಪದವಿ ಕಾಲೇಜಿನ ಕನ್ನಡ ವಿಭಾಗದಲ್ಲಿ ಸಹಾಯಕ ಪ್ರಾಧ್ಯಾಪಕರಾಗಿ ಕಾರ್ಯನಿರ್ವಹಿಸುತ್ತಿರುವ ಅಂಪಾರು ನಿತ್ಯಾನಂದ ಶೆಟ್ಟಿ ಅವರಿಗೆ ‘ಕುಂದಾಪುರ ಪರಿಸರದ ದೈವಾರಾಧನೆ’ ಎಂಬ ವಿಷಯದ ಕುರಿತು ಮಂಗಳೂರು ವಿಶ್ವವಿದ್ಯಾನಿಲಯದ ಎಸ್.ವಿ.ಪಿ. ಕನ್ನಡ ಅಧ್ಯಯನ ಸಂಸ್ಥೆಯ ಪ್ರಾಧ್ಯಾಪಕ ಪ್ರೊ. ಅಭಯ್ ಕುಮಾರ್ ಕೆ. ಇವರ ಮಾರ್ಗದರ್ಶನದಲ್ಲಿ ಸಿದ್ಧಪಡಿಸಿದ ಸಂಶೋಧನಾ ಪ್ರೌಢ ಪ್ರಬಂಧಕ್ಕೆ ಮಂಗಳೂರು ವಿಶ್ವವಿದ್ಯಾನಿಲಯ ಪಿಎಚ್‌ಡಿ ಪದವಿ ನೀಡಿ ಗೌರವಿಸಿದೆ.

ನಿತ್ಯಾನಂದ ಶೆಟ್ಟಿ 2011ರಲ್ಲಿ ‘ವೈದೇಹಿ ಕಥೆಗಳಲ್ಲಿ ಅನಾವರಣಗೊಂಡ ಪ್ರಾದೇಶಿಕ ಸಂಸ್ಕೃತಿ’ ಎಂಬ ವಿಷಯದ ಕುರಿತು ಮಾನಸಗಂಗೋತ್ರಿಯ ಕುವೆಂಪು ಕನ್ನಡ ಅಧ್ಯಯನ ಸಂಸ್ಥೆಯ ಪ್ರಾಧ್ಯಾಪಕರಾದ ಪ್ರೊ. ಲೋಲಾಕ್ಷಿ ಎನ್.ಕೆ ಇವರ ಮಾರ್ಗದರ್ಶನದಲ್ಲಿ ಸಿದ್ಧಪಡಿಸಿದ ಸಂಶೋಧನಾ ಪ್ರಬಂಧಕ್ಕೆ ದ್ರಾವಿಡ ವಿಶ್ವವಿದ್ಯಾನಿಲಯದಿಂದ ಎಂ.ಫಿಲ್ ಪದವಿ ಪಡೆದುಕೊಂಡಿದ್ದರು.

ಅಲ್ಲದೆ 2014ರಲ್ಲಿ ಹೊಸದಿಲ್ಲಿಯ ವಿಶ್ವವಿದ್ಯಾನಿಲಯ ಧನಸಹಾಯ ಆಯೋಗದ ಅನುದಾನದಲ್ಲಿ ಕುಂದ ಜಾನಪದ ಸಾಹಿತ್ಯದಲ್ಲಿ ಪ್ರಾದೇಶಿಕ ಸಂಸ್ಕೃತಿಯ ನಿರೂಪಣೆ ಎಂಬ ವಿಷಯದ ಕುರಿತು ಸಂಶೋಧನಾ ಕೆಲಸಗಳನ್ನು ಸಹ ಪೂರ್ಣಗೊಳಿಸಿದ್ದರು. ವೈದೇಹಿ ಕಥೆಗಳಲ್ಲಿ ಅನಾವರಣಗೊಂಡ ಪ್ರಾದೇಶಿಕ ಸಂಸ್ಕೃತಿ ಹಾಗೂ ಜಾನಪದ ಸಿರಿ ಇವರ ಪ್ರಕಟಿತ ಕೃತಿಗಳಾಗಿವೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News