ನ. 29ರಿಂದ ಶಿಕ್ಷಕರ ಕೋರಿಕೆ ವರ್ಗಾವಣೆ ಕೌನ್ಸಿಲಿಂಗ್

Update: 2021-11-27 14:24 GMT

ಉಡುಪಿ, ನ. 27: 2019-20ನೇ ಸಾಲಿಗೆ ವರ್ಗಾವಣೆ ಬಯಸಿ ಅರ್ಜಿ ಸಲ್ಲಿಸಿರುವ ಪ್ರಾಥಮಿಕ ಮತ್ತು ಪ್ರೌಢ ಶಾಲಾ ಶಿಕ್ಷಕರ ಕೋರಿಕೆ ವರ್ಗಾವಣೆ ಗಳನ್ನು ಶೇ.7ಕ್ಕೆ ಮಿತಿಗೊಳಿಸಿ ಗಣಕೀಕೃತ ಕೌನ್ಸಿಲಿಂಗ್ ಪ್ರಕ್ರಿಯೆಗೆ ಮಾರ್ಗಸೂಚಿ ಸಹಿತ ವರ್ಗಾವಣೆ ವೇಳಾ ಪಟ್ಟಿಯನ್ನು ಪ್ರಕಟಿಸಲಾಗಿದೆ.

ಕೌನ್ಸಿಲಿಂಗ್ ಪ್ರಕ್ರಿಯೆಯು ಪ್ರಾಥಮಿಕ ಮತ್ತು ಪ್ರೌಢ ಶಾಲಾ ಮುಖ್ಯಶಿಕ್ಷಕರು, ಸಹ ಶಿಕ್ಷಕರು, ದೈಹಿಕ ಶಿಕ್ಷಣ ಶಿಕ್ಷಕರು ಹಾಗೂ ವಿಶೇಷ ಶಿಕ್ಷಕರಿಗೆ ನ.29ರಿಂದ ಡಿ.4ರವರೆಗೆ ಉಡುಪಿ ಸರಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜಿನ ಪ್ರೌಢ ಶಾಲಾ ವಿಭಾಗದ ಸವ್ಯಸಾಚಿ ಸಭಾಂಗಣದಲ್ಲಿ ನಡೆಯಲಿದೆ.

ಅದರಂತೆ ಅಂತಿಮ ಆದ್ಯತಾ ಪಟ್ಟಿಯಲ್ಲಿರುವ ಎಲ್ಲಾ ಶಿಕ್ಷಕರು ನಿಗದಿ ಪಡಿಸಿದ ವೇಳಾಪಟ್ಟಿಯಂತೆ ಕೌನ್ಸಿಲಿಂಗ್‌ಗೆ ಹಾಜರಾಗು ವಂತೆ ಉಡುಪಿ ಜಿಲ್ಲಾ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News