ಕಾರ್ಕಳ : ಅಪರಿಚಿತ ಮೃತದೇಹ ಪತ್ತೆ

Update: 2021-11-27 16:20 GMT

ಕಾರ್ಕಳ : ಕಾರ್ಕಳ ಕಾಬೆಟ್ಟು ಸಮೀಪ ಮುಖ್ಯರಸ್ತೆ ಬದಿಯಲ್ಲಿರುವ ಸಮೃದ್ಧಿ ಅಪಾರ್ಟ್‌ಮೆಂಟ್‌ ನ ಪ್ರಥಮ ಮಹಡಿಯಲ್ಲಿ ಅಪರಿಚಿತ ಗಂಡಸಿನ ಮೃತದೇಹ ಪತ್ತೆಯಾಗಿದೆ.

ಮೃತದೇಹ ಕೊಳೆತ ಸ್ಥಿತಿಯಲ್ಲಿರುವುದರಿಂದ 15 ದಿನಗಳ ಹಿಂದೆ ಮೃತಪಟ್ಟಿರಬೇಕೆಂದು ಶಂಕಿಸಲಾಗಿದೆ.

ಅಪಾರ್ಟ್‌ಮೆಂಟ್‌ ನಲ್ಲಿ ಯಾರೂ ವಾಸ್ತವ್ಯವಿಲ್ಲದಿರುವುದರಿಂದ ಘಟನೆ ತಡವಾಗಿ ಬೆಳಕಿಗೆ ಬಂದಿದೆ.  ಕಾರ್ಕಳ ನಗರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿರುತ್ತಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News