ಪ್ರತ್ಯೇಕ ಪ್ರಕರಣ: ಇಬ್ಬರ ಆತ್ಮಹತ್ಯೆ

Update: 2021-11-27 17:22 GMT

ಮಣಿಪಾಲ, ನ.27: ಮದ್ಯಪಾನ ಸೇವನೆ ಚಟ ಹೊಂದಿದ್ದ ಮೂಡು ಪೆರಂಪಳ್ಳಿಯ ರವಿ(44) ಎಂಬವರು ಜೀವನದಲ್ಲಿ ಜಿಗುಪ್ಸೆ ಗೊಂಡು ನ.25 ರಂದು ರಾತ್ರಿ ಭೂತಪಾಡಿ ಎಂಬಲ್ಲಿ ಮರಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಉಡುಪಿ: ಆರ್ಥಿಕ ತೊಂದರೆಯಿಂದ ಜೀವನದಲ್ಲಿ ಜಿಗುಪ್ಸೆಗೊಂಡು ನ.16ರಂದು ಬುಡ್ನಾರು ಅಂಗನವಾಡಿ ಬಳಿ ತಾನು ವಾಸವಿದ್ದ ಬಾಡಿಗೆ ಮನೆಯಲ್ಲಿ ಡಿಡಿಟಿ ಪೌಡರನ್ನು ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ರಿಕ್ಷಾ ಚಾಲಕ ಸುರೇಂದ್ರ ಸಾಲ್ಯಾನ್(46) ಎಂಬವರು ಮಂಗಳೂರು ವೆನ್ಲಾಕ್ ಆಸ್ಪತ್ರೆಯಲ್ಲಿ ನ.26ರಂದು ರಾತ್ರಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟರು. ಈ ಬಗ್ಗೆ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News