ಚಳಿಗಾಲದ ಅಧಿವೇಶನ: ಪ್ರಧಾನಿ ಮೋದಿ ಅಧ್ಯಕ್ಷತೆಯಲ್ಲಿ ಇಂದು ಸರ್ವಪಕ್ಷ ಸಭೆ

Update: 2021-11-28 05:15 GMT
ನರೇಂದ್ರ ಮೋದಿ (PTI)

ಹೊಸದಿಲ್ಲಿ: ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ಇಂದು ಸರ್ವಪಕ್ಷ ಸಭೆಯನ್ನು ಕರೆಯಲಾಗಿದೆ. ಸಂಸತ್ತಿನ ಚಳಿಗಾಲದ ಅಧಿವೇಶನದ ಹಿನ್ನೆಲೆಯಲ್ಲಿ ಈ ಸಭೆಯನ್ನು ಕರೆಯಲಾಗಿದೆ.

ಈ ಅಧಿವೇಶನವು ರಾಜಕೀಯವಾಗಿ ಸಾಕಷ್ಟು ಮಹತ್ವ ಪಡೆದುಕೊಂಡಿದೆ. ಕೃಷಿ ಕಾನೂನು ರದ್ದತಿ, ಇಂಧನ ಬೆಲೆ ಏರಿಕೆ, ತನಿಖಾ ಸಂಸ್ಥೆಗಳ ಮುಖ್ಯಸ್ಥರ ಅಧಿಕಾರ ಅವಧಿ ವಿಸ್ತರಣೆ, ಸೇರಿದಂತೆ ಪ್ರಮುಖ ವಿಷಯಗಳ ಕುರಿತು ಚರ್ಚೆಯಾಗುವ ಸಾಧ್ಯತೆ ಇದೆ.

ನ.29ರಿಂದ ಅಧಿವೇಶನವು ಪ್ರಾರಂಭವಾಗಲಿದ್ದು, ಡಿ.23ಕ್ಕೆ ಮುಕ್ತಾಯವಾಗಲಿದೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News