ಕೊರೋನ 3ನೆ ಅಲೆ ಆತಂಕ: ದ.ಕ. ಜಿಲ್ಲೆಯ ಗಡಿ ಭಾಗದಲ್ಲಿ ತಪಾಸಣೆ

Update: 2021-11-28 07:19 GMT

ಮಂಗಳೂರು, ನ. 28: ವಿದೇಶದಲ್ಲಿ ರೂಪಾಂತರಿತ ಕೊರೋನ ವೈರಸ್ ಪತ್ತೆ ಹಾಗೂ ಕೊರೋನ 3ನೆ ಅಲೆಯ ಆತಂಕದ ಹಿನ್ನೆಲೆಯಲ್ಲಿ ದ.ಕ. ಜಿಲ್ಲೆಯ ಗಡಿ ಭಾಗಗಳಲ್ಲಿ ವಾಹನ ಸವಾರರ ಬಿಗಿ ತಪಾಸಣೆ ನಡೆಸಲಾಗುತ್ತಿದೆ.

ಕೇರಳದಿಂದ ದ.ಕ. ಜಿಲ್ಲಾ ಪ್ರವೇಶಕ್ಕೆ ಆರ್‌ಟಿಪಿಸಿಆರ್ ನೆಗೆಟಿವ್ ಪ್ರಮಾಣ ಪತ್ರ ಹೊಂದಿರುವುದನ್ನು ಕಡ್ಡಾಯಗೊಳಿಸಲಾಗಿದೆ. ಗಡಿ ಪ್ರದೇಶದಲ್ಲಿ ದಿನದ 24 ಗಂಟೆಯೂ ಕಟ್ಟುನಿಟ್ಟಿನ ನಿಗಾ ವಹಿಸುವಂತೆ ನಿನ್ನೆ ನಡೆದ ವೀಡಿಯೋ ಕಾನ್ಫರೆನ್ಸ್‌ನಲ್ಲಿ ಮುಖ್ಯಮಂತ್ರಿಯವರು ದ.ಕ. ಜಿಲ್ಲಾಧಿಕಾರಿಗೆ ಸೂಚನೆ ನೀಡಿದ್ದಾರೆ.

ಮೂರು ಪಾಳಿಯಲ್ಲಿ ಅಧಿಕಾರಿ, ಸಿಬ್ಬಂದಿ ಹಾಗೂ ಪೊಲೀಸರನ್ನು ನಿಯೋಜಿಸಲು ಸೂಚಿಸಿರುವಂತೆಯೇ ಗಡಿ ಭಾಗಗಳಲ್ಲಿ ಪೊಲೀಸರು ಆರೋಗ್ಯ ಇಲಾಖೆಯ ಸಿಬ್ಬಂದಿ ಉಪಸ್ಥಿತಿಯಲ್ಲಿ ತಪಾಸಣೆಯನ್ನು ಬಿಗಿಗೊಳಿಸಿದ್ದಾರೆ.

Full View

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News