×
Ad

ಅಂತ್ಯಸಂಸ್ಕಾರಕ್ಕೆ ತೆರಳುತ್ತಿದ್ದಾಗ ಅಪಘಾತ: 18 ಮಂದಿ ಮೃತ್ಯು, ಐವರಿಗೆ ಗಾಯ

Update: 2021-11-28 12:22 IST
ಸಾಂದರ್ಭಿಕ ಚಿತ್ರ

ನಾಡಿಯಾ: ಪಶ್ಚಿಮ ಬಂಗಾಳದ ನಾಡಿಯಾ ಜಿಲ್ಲೆಯ ಫುಲ್‌ಬರಿ ಎಂಬಲ್ಲಿ ಲಾರಿಗೆ ಮೆಟಾಡೊರ್ ವಾಹನ ಢಿಕ್ಕಿ ಹೊಡೆದು ಕನಿಷ್ಠ 18 ಮಂದಿ ಮೃತಪಟ್ಟು ಐವರು ತೀವ್ರವಾಗಿ ಗಾಯಗೊಂಡಿದ್ದಾರೆ.

ನಾರ್ಥ್ ಪರಗಣಾ 24 ಜಿಲ್ಲೆಯ ಬಗ್ದಾದಿಂದ ನಬದೀಪ್ ಸ್ಮಶಾನದಲ್ಲಿ ಮಹಿಳೆಯೊಬ್ಬರ ಅಂತ್ಯಸಂಸ್ಕಾರಕ್ಕಾಗಿ ಮೆಟಾಡೊರ್ ವಾಹನದಲ್ಲಿ ತೆರಳುತ್ತಿದ್ದಾಗ ಅಪಘಾತ ಸಂಭವಿಸಿದೆ ಎಂದು ಹನ್ಸಖಲಿ ಪೊಲೀಸ್ ಠಾಣೆಯ ಅಧಿಕಾರಿಗಳು ಹೇಳಿದ್ದಾರೆ.

ಮೆಟಾಡೊರ್ ಕಾರು ಕಲ್ಲು ತುಂಬಿದ್ದ ಲಾರಿ ಢಿಕ್ಕಿ ಹೊಡೆದು ಈ ಅನಾಹುತ ಸಂಭವಿಸಿದೆ. ರಸ್ತೆ ಬದಿಯಲ್ಲಿ ನಿಲ್ಲಿಸಿದ್ದ ಲಾರಿಯನ್ನು ದಿಢೀರನೇ ಚಾಲನೆ ಮಾಡಿದಾಗ ಈ ದುರಂತ ಸಂಭವಿಸಿದೆ ಎನ್ನಲಾಗಿದೆ.

"ನಾಡಿಯಾ ಜಿಲ್ಲೆಯಲ್ಲಿ ರಸ್ತೆ ಬದಿ ನಿಲ್ಲಿಸಿದ್ದ ಲಾರಿಗೆ ಕಾರು ಢಿಕ್ಕಿ ಹೊಡೆದ ಘಟನೆಯಲ್ಲಿ ಹದಿನೆಂಟು ಮಂದಿ ಮೃತಪಟ್ಟು ಐವರು ಗಾಯಗೊಂಡ ಘಟನೆ ತೀವ್ರ ನೋವು ತಂದಿದೆ" ಎಂದು ರಾಜ್ಯಪಾಲ ಜಗದೀಪ್ ಧನ್‌ಕರ್ ಟ್ವೀಟ್ ಮಾಡಿದ್ದಾರೆ.

ಗಾಯಾಳುಗಳನ್ನು ಶಕ್ತಿನಗರ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದ್ದು, ದಟ್ಟವಾದ ಮಂಜು ಮತ್ತು ವಾಹನವನ್ನು ಅತಿ ವೇಗವಾಗಿ ಚಲಾಯಿಸುತ್ತಿದ್ದುದು ಘಟನೆಗೆ ಕಾರಣ ಎಂದು ಸ್ಥಳೀಯರು ಹೇಳಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News