ಬೆಂಗಳೂರು: ಬಹುಕೋಟಿ ಅಕ್ರಮ ಆಸ್ತಿ ಪತ್ತೆ ಪ್ರಕರಣ; ನಿವೃತ್ತ ಅಧಿಕಾರಿ ಬಂಧನ

Update: 2021-11-28 10:54 GMT

ಬೆಂಗಳೂರು, ನ. 28: ನಿಗದಿತ ಆದಾಯಕ್ಕಿಂತ ಅಧಿಕ ಮೊತ್ತದ ಆಸ್ತಿ ಗಳಿಕೆ ಆರೋಪ ಸಂಬಂಧ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನಿರ್ಮಿತಿ ಕೇಂದ್ರದ ಮಾಜಿ ಯೋಜನಾ ನಿರ್ದೇಶಕ ಆರ್.ಎನ್.ವಾಸುದೇವ್ ಅವರನ್ನು ಭ್ರಷ್ಟಾಚಾರ ನಿಗ್ರಹ ದಳ( ಎಸಿಬಿ)ದ ಅಧಿಕಾರಿಗಳು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.

ಇತ್ತೀಚಿಗೆ ನಡೆದ ಎಸಿಬಿ ದಾಳಿ ಸಂದರ್ಭದಲ್ಲಿ ಅತಿ ಹೆಚ್ಚು ಪ್ರಮಾಣದಲ್ಲಿ ಅಕ್ರಮ ಆಸ್ತಿ ಪತ್ತೆಯಾಗಿದ್ದರೂ ಕೂಡ ವಾಸುದೇವ್ ಅಧಿಕಾರಿಗಳ ಪ್ರಶ್ನೆಗೆ ಉತ್ತರಿಸಿರಲಿಲ್ಲ. ಹೀಗಾಗಿ, ತನಿಖೆಗೆ ಸಹಕಾರ ನೀಡದ ಹಿನ್ನಲೆ ಹಾಗೂ ಭ್ರಷ್ಟಾಚಾರ ಆರೋಪದಡಿ ಬಂಧಿಸಿ ನಗರದ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹಕ್ಕೆ ಕಳುಹಿಸಲಾಗಿದೆ.

ವಾಸುದೇವ್ ಅವರು ಪತ್ನಿ, ಮಕ್ಕಳು ಹಾಗೂ ತನ್ನ ಹೆಸರಿನಲ್ಲಿ ಕೋಟ್ಯಾಂತರ ರೂಪಾಯಿ ಮೊತ್ತದ ಆಸ್ತಿ ಮಾಡಿದ್ದು, ಬೇನಾಮಿಯಲ್ಲಿ ವ್ಯವಹಾರ ಮಾಡಿರುವ ಶಂಕೆ ವ್ಯಕ್ತವಾಗಿದೆ. ಹೀಗಾಗಿ, ನಾಳೆ (ನ.29)ಕುಟುಂಬಸ್ಥರ ವಿಚಾರಣೆ ಹಾಗೂ ದಾಖಲೆಗಳ ಪರಿಶೀಲನೆ ನಡೆಯಲು ಎಸಿಬಿ ಅಧಿಕಾರಿಗಳು ಮುಂದಾಗಿದ್ದಾರೆ. 
 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News