ಶೈಕ್ಷಣಿಕ ಸಂಸ್ಥೆಗಳಲ್ಲಿ ಕೋವಿಡ್ ಮಾರ್ಗಸೂಚಿ ಪಾಲಿಸುವಂತೆ ರಾಜ್ಯ ಸರಕಾರ ಆದೇಶ

Update: 2021-11-28 12:58 GMT

ಬೆಂಗಳೂರು, ನ. 28: ರೂಪಾಂತರಿ ವೈರಸ್‍ನ ನಿಯಂತ್ರಣಕ್ಕಾಗಿ ಶಿಕ್ಷಣ ಸಂಸ್ಥೆಗಳಲ್ಲಿ, ವಿಶೇಷವಾಗಿ ಮೆಡಿಕಲ್, ಪ್ಯಾರಾ ಮೆಡಿಕಲ್ ಶಿಕ್ಷಣ ಸಂಸ್ಥೆಗಳಲ್ಲಿ, ಕಟ್ಟುನಿಟ್ಟಿನ ಕ್ರಮವಹಿಸುವಂತೆ ರಾಜ್ಯ ಸರಕಾರವು ಆದೇಶ ಹೊರಡಿಸಿದೆ. 

ರಾಜ್ಯದ ಬೆಂಗಳೂರು ಸೇರಿದಂತೆ ಮೈಸೂರು, ಧಾರವಾಡ ಜಿಲ್ಲೆಯಲ್ಲಿ ಶೈಕ್ಷಣಿಕ ಚಟುವಟಿಕೆಯ ಭಾಗವಾಗಿ ಸಾಮಾಜಿಕ, ಸಾಂಸ್ಕೃತಿಕ ಮತ್ತು ಅಕಾಡೆಮಿಕ್ ಕಾರ್ಯಕ್ರಮಗಳನ್ನು ಮುಂದೂಡುವಂತೆ ಆರೋಗ್ಯ ಇಲಾಖೆ ಶಿಕ್ಷಣ ಸಂಸ್ಥೆಗಳಿಗೆ ಸೂಚನೆ ನೀಡಿದೆ. ಹಾಗೆಯೇ, ಕೋವಿಡ್-19 ಮಾರ್ಗಸೂಚಿ ಕ್ರಮಗಳನ್ನು ಕಡ್ಡಾಯವಾಗಿ ಪಾಲಿಸುವಂತೆ ತಿಳಿಸಿದೆ.

ಈ ಜಿಲ್ಲೆಗಳ ಮೆಡಿಕಲ್, ಪ್ಯಾರಾ ಮೆಡಿಕಲ್ ಹಾಗೂ ಇತರೆ ಶೈಕ್ಷಣಿಕ ವ್ಯಾಸಂಗನಿರತ ವಿದ್ಯಾರ್ಥಿಗಳನ್ನು ಕೋವಿಡ್ ಸೋಂಕು ಪರೀಕ್ಷೆಗೆ ಒಳಪಡಿಸಬೇಕು. ಒಂದು ವೇಳೆ ಸೋಂಕಿನ ಲಕ್ಷಣಗಳು ಕಂಡುಬಂದಲ್ಲಿ, ಪರೀಕ್ಷೆಗೆ ಒಳಪಡಿಸಿ, ಮಾರ್ಗಸೂಚಿಯಂತೆ ಚಿಕಿತ್ಸೆ ನೀಡಬೇಕು.

ಕಾನ್ಫೆರೆನ್ಸ್, ಸೆಮಿನಾರ್, ಅಕಾಡೆಮಿಕ್ ಈವೆಂಟ್ ಸೇರಿದಂತೆ ಇತರೆ ಶೈಕ್ಷಣಿಕ ಚಟುವಟಿಕೆಯನ್ನು ಸಾಧ್ಯವಾದಷ್ಟು ಮುಂದೂಡುವುದು.

ಅಲ್ಲದೇ ಪರ್ಯಾಯ ಮಾರ್ಗದ ಮೂಲಕ ನಡೆಸುವುದು. ಶೈಕ್ಷಣಿಕ ಸಂಸ್ಥೆಯ ಮುಖ್ಯಸ್ಥರು ಕೊರೋನಾ ನಿಯಂತ್ರಣ ಕ್ರಮಗಳನ್ನು ಪಾಲಿಸುವಂತ ನಿಯಂತ್ರಣ ಕ್ರಮಗಳನ್ನು ಶಾಲಾ-ಕಾಲೇಜುಗಳನ್ನು ಅನುಸರಿಸುವುದು. ಅಗತ್ಯವಿದ್ದಲ್ಲಿ ವಿರ್ಚುಯಲ್ ಮಾಧ್ಯಮದ ಮೂಲಕ ಶೈಕ್ಷಣಿಕ ಸಂಸ್ಥೆಗಳಿಂದ ಸಮಿನಾರ್, ಕಾನ್ಫೆರೆನ್ಸ್ ಆಯೋಜಿಸುವುದು. ಶೈಕ್ಷಣಿಕ ಸಂಸ್ಥೆಗಳ ಮುಖ್ಯಸ್ಥರು ತಮ್ಮ ಶಿಕ್ಷಣ ಸಂಸ್ಥೆಗಳಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಕಡ್ಡಾಯವಾಗಿ ಲಸಿಕೆ ಹಾಕಿಸುವಂತೆ ಕ್ರಮ ಕೈಗೊಳ್ಳುವುದು ಎಂದು ಆದೇಶದಲ್ಲಿ ಉಲ್ಲೇಖಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News