'ಕಲ್ಯಾಣ ಕರ್ನಾಟಕದ ಅಭಿವೃದ್ಧಿ ಈ ಸರ್ಕಾರದಿಂದ ಸಾಧ್ಯವೇ?': ನೀತಿ ಆಯೋಗದ ವರದಿ ಉಲ್ಲೇಖಿಸಿ ಕಾಂಗ್ರೆಸ್ ತರಾಟೆ

Update: 2021-11-28 13:16 GMT

 ಬೆಂಗಳೂರು: 'ಕಲ್ಯಾಣ ಕರ್ನಾಟಕಕ್ಕೆ ಅನುದಾನ ಕೊಡದ, ಉಸ್ತುವಾರಿ ಸಚಿವರನ್ನ ನೇಮಕ ಮಾಡದ ಈ ಸರ್ಕಾರದಿಂದ ಅಭಿವೃದ್ಧಿ ಸಾಧ್ಯವೇ?' ಎಂದು ರಾಜ್ಯ ಬಿಜೆಪಿ ಸರಕಾರವನ್ನು ಕಾಂಗ್ರೆಸ್ ತರಾಟೆಗೆ ತೆಗೆದುಕೊಂಡಿದೆ. 

ಈ ಕುರಿತು ಟ್ವೀಟ್ ಮಾಡಿರುವ ಕಾಂಗ್ರೆಸ್, ''ನೀತಿ ಆಯೋಗದ ಬಡತನ ಸೂಚ್ಯಂಕದ ವರದಿಯಲ್ಲಿ ಕರ್ನಾಟಕದ ಯಾದಗಿರಿ ಜಿಲ್ಲೆ ಅತೀ ಬಡತನ ಹೊಂದಿರುವ ಅಂಶ ಬೆಳಕಿಗೆ ಬಂದಿದೆ, ಕಲಬುರ್ಗಿ, ರಾಯಚೂರು, ಕೊಪ್ಪಳ, ಬಳ್ಳಾರಿ, ಸೇರಿದಂತೆ ಕಲ್ಯಾಣ ಕರ್ನಾಟಕದ ಜಿಲ್ಲೆಗಳು ಅತಿ ಹಿಂದುಳಿದಿವೆ. ಕಲ್ಯಾಣ ಕರ್ನಾಟಕಕ್ಕೆ ಅನುದಾನ ಕೊಡದ, ಉಸ್ತುವಾರಿ ಸಚಿವರನ್ನ ನೇಮಕ ಮಾಡದ ಈ ಸರ್ಕಾರದಿಂದ ಅಭಿವೃದ್ಧಿ ಸಾಧ್ಯವೇ?'' ಎಂದು ಪ್ರಶ್ನಿಸಿದೆ. 

ನಿಷ್ಪಕ್ಷಪಾತ ನ್ಯಾಯಾಂಗ ತನಿಖೆಯಾಗಲಿ

''ತಮ್ಮ ಸರ್ಕಾರದ ಭ್ರಷ್ಟಾಚಾರವನ್ನು ಮುಚ್ಚಿಕೊಳ್ಳಲು ಕಾಂಗ್ರೆಸ್ ಅವಧಿಯ ಟೆಂಡರ್‌ಗಳನ್ನು ತನಿಖೆ ಮಾಡುತ್ತೇವೆ ಎನ್ನುತ್ತಾರೆ ಸಿಎಂ ಬೊಮ್ಮಾಯಿ, ಕಾಂಗ್ರೆಸ್ ಅವಧಿಯೂ ತನಿಖೆಯಾಗಲಿ, ಬಿಜೆಪಿ ಅವಧಿಯೂ ತನಿಖೆಯಾಗಲಿ, ಆದರೆ ನರಿಗಳು ನ್ಯಾಯ ಹೇಳುವಂತಾಗದೆ ನಿಷ್ಪಕ್ಷಪಾತ ನ್ಯಾಯಾಂಗ ತನಿಖೆಯಾಗಲಿ, 40% ಲೂಟಿ ಮಾಡಿದ ಕಳ್ಳರು ಯಾರೆಂದು ತಿಳಿಯಲಿ'' ಎಂದು ಕಾಂಗ್ರೆಸ್ ಟ್ವೀಟ್ ಮೂಲಕ ಒತ್ತಾಯಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News