​ಉಡುಪಿ: ಕೋವಿಡ್‌ಗೆ 10 ಮಂದಿ ಪಾಸಿಟಿವ್

Update: 2021-11-28 14:09 GMT

ಉಡುಪಿ, ನ. 28: ಜಿಲ್ಲೆಯಲ್ಲಿ ಇಂದು ಹತ್ತು ಮಂದಿ ಕೋವಿಡ್‌ಗೆ ಪಾಸಿಟಿವ್ ಬಂದಿದ್ದಾರೆ. ದಿನದಲ್ಲಿ ಐವರು ಕೋವಿಡ್‌ನಿಂದ ಗುಣಮುಖರಾದರೆ, 55 ಮಂದಿ ಇನ್ನೂ ಸೋಂಕಿಗೆ ಚಿಕಿತ್ಸೆಯಲ್ಲಿದ್ದಾರೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ನಾಗಭೂಷಣ ಉಡುಪ ತಿಳಿಸಿದ್ದಾರೆ.

ದಿನದಲ್ಲಿ ಎಂಟು ಮಂದಿ ಪುರುಷರು ಹಾಗೂ ಇಬ್ಬರು ಮಹಿಳೆಯರಲ್ಲಿ ಸೋಂಕು ಪತ್ತೆಯಾಗಿದೆ. ಇವರಲ್ಲಿ ಮೂವರು ಉಡುಪಿ ತಾಲೂಕಿನವರಾದರೆ ಏಳು ಮಂದಿ ಕುಂದಾಪುರದವರು. ಪಾಸಿಟಿವ್ ಬಂದ ಒಬ್ಬರನ್ನು ಹೊರತು ಪಡಿಸಿ ಉಳಿದವರಿಗೆಲ್ಲಾ ಅವರವರ ಮನೆಯಲ್ಲಿರಿಸಿ ಚಿಕಿತ್ಸೆ ನೀಡಲಾಗುತ್ತಿದೆ. ರವಿವಾರ ಸಹ ಜಿಲ್ಲೆಯಲ್ಲಿ ಕೊರೋನದಿಂದ ಯಾರೂ ಮೃತಪಟ್ಟಿಲ್ಲ.

ಶನಿವಾರ ಸೋಂಕಿನಿಂದ ಐವರು ಗುಣಮುಖರಾಗಿದ್ದು, ಈವರೆಗೆ ಕೊರೋನದಿಂದ ಚೇತರಿಸಿಕೊಂಡವರ ಸಂಖ್ಯೆ 76,340ಕ್ಕೇರಿದೆ. ನಿನ್ನೆ ಜಿಲ್ಲೆಯಲ್ಲಿ 1396 ಮಂದಿಗೆ ಕೋವಿಡ್ ಪರೀಕ್ಷೆ ನಡೆಸಲಾಗಿದೆ. ಜಿಲ್ಲೆಯಲ್ಲಿ ಈವರೆಗೆ ಸೋಂಕಿಗೆ ಪಾಸಿಟಿವ್ ಬಂದವರ ಸಂಖ್ಯೆ 76,871ಕ್ಕೇರಿದೆ.

3642 ಮಂದಿಗೆ ಲಸಿಕೆ:  ಇಂದು ಜಿಲ್ಲೆಯಲ್ಲಿ ಒಟ್ಟು 3642 ಮಂದಿ ಕೋವಿಡ್ ಲಸಿಕೆ ಸ್ವೀಕರಿಸಿದ್ದಾರೆ. ಇವರಲ್ಲಿ 466 ಮಂದಿ ಮೊದಲ ಡೋಸ್ ಹಾಗೂ 3176 ಮಂದಿ ಎರಡನೇ ಡೋಸ್ ಸ್ವೀಕರಿಸಿದ್ದಾರೆ ಎಂದು ಡಿಎಚ್‌ಓ ಡಾ. ನಾಗಭೂಷಣ ಉಡುಪ ತಿಳಿಸಿದ್ದಾರೆ.

ಲಸಿಕೆ ಪಡೆದವರಲ್ಲಿ 18 ವರ್ಷದಿಂದ 44 ವರ್ಷದೊಳಗಿನ 315 ಮಂದಿ ಮೊದಲ ಡೋಸ್ ಹಾಗೂ 2437 ಮಂದಿ ಎರಡನೇ ಡೋಸ್ ಲಸಿಕೆಯನ್ನು ಸ್ವೀಕರಿಸಿದರೆ, 45 ವರ್ಷ ಮೇಲಿನ 151 ಮಂದಿ ಮೊದಲ ಡೋಸ್ ಹಾಗೂ 732 ಮಂದಿ ಎರಡನೇ ಡೋಸ್ ಪಡೆದಿದ್ದಾರೆ. ಅಲ್ಲದೇ ಏಳು ಮಂದಿ ಮುಂಚೂಣಿ ಕಾರ್ಯಕರ್ತರು ಸಹ ಎರಡನೇ ಡೋಸ್ ಲಸಿಕೆ ಸ್ವೀಕರಿಸಿದವರಲ್ಲಿ ಸೇರಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News